Untitled Document
Sign Up | Login    
Dynamic website and Portals
  
December 5, 2014

ಕೇಂದ್ರೀಯ ವಿದ್ಯಾಲಯಗಳಲ್ಲಿ ಪ್ರಸಕ್ತ ವರ್ಷ ತೃತೀಯ ಭಾಷೆ ಸಂಸ್ಕೃತದ ಪರೀಕ್ಷೆ ಇಲ್ಲ

ಸುಪ್ರೀಂ ಕೋರ್ಟ್ ಸುಪ್ರೀಂ ಕೋರ್ಟ್

ನವದೆಹಲಿ : 'ಕೇಂದ್ರೀಯ ವಿದ್ಯಾಲಯ'ಗಳಲ್ಲಿ ಸಂಸ್ಕೃತವನ್ನು ತೃತೀಯ ಭಾಷೆಯನ್ನಾಗಿ ಸೇರಿಸಿದ್ದರೂ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಸಂಸ್ಕೃತ ಪರೀಕ್ಷೆ ಇರುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಅಟಾರ್ನಿ ಜನರಲ್ ಮುಕುಲ್ ರೋಹಟಗಿ ಅವರು ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದ್ದು ವಿದ್ಯಾರ್ಥಿಗಳಿಗೆ ತೊಂದರೆಯಾಗಲಿರುವ ಹಿನ್ನೆಲೆಯಲ್ಲಿ ಸಂಸ್ಕೃತ ಪರೀಕ್ಷೆಯನ್ನು ನಡೆಸದೇ ಇರಲು ತೀರ್ಮಾನಿಸಿರುವುದಾಗಿ ತಿಳಿಸಿದ್ದಾರೆ.

ಶೈಕ್ಷಣಿಕ ವರ್ಷದ ಮಧ್ಯಭಾಗದಲ್ಲಿ ಕೇಂದ್ರ ಸರ್ಕಾರ ಕೇಂದ್ರೀಯ ವಿದ್ಯಾಲಯಗಳಲ್ಲಿ ಸಂಸ್ಕೃತವನ್ನು ತೃತೀಯ ಭಾಷೆಯನ್ನಾಗಿ ಘೋಷಿಸಿ ಆದೇಶ ಹೊರಡಿಸಿತ್ತು. ಸರ್ಕಾರದ ಈ ಕ್ರಮದಿಂದ ವಿದ್ಯಾರ್ಥಿಗಳು ಗೊಂದಲಕ್ಕೀಡಾಗಲಿದ್ದಾರೆ ಎಂದು ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು. ಈ ಹಿನ್ನೆಲೆಯಲ್ಲಿ ಕೋರ್ಟ್ ಗೆ ಕೇಂದ್ರ ಸರ್ಕಾರ ಅಫಿಡವಿಟ್ ಸಲ್ಲಿಸಿದೆ.

ಆದಾಗ್ಯೂ, ಜರ್ಮನ್ ಇದೀಗ ಐಚ್ಛಿಕ ಭಾಷೆ ಮಾತ್ರ ಎಂದು ಸರ್ಕಾರ ಸುಪ್ರೀಂಗೆ ಮನವರಿಕೆ ಮಾಡಿದೆ. ಈ ವಿಷಯದ ಬಗ್ಗೆ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರಕ್ಕೆ ಮುಂದೂಡಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited