Untitled Document
Sign Up | Login    
Dynamic website and Portals
  
December 5, 2014

ಲಷ್ಕರ್ ಎ ತೋಬ್ದಾ ಉಗ್ರ ಸಂಘಟನೆಗೆ ಮೋದಿ ಗುರಿ: ಜಮ್ಮು-ಕಾಶ್ಮೀರದಲ್ಲಿ ತೀವ್ರ ಕಟ್ಟೆಚ್ಚರ

ಕಾಶ್ಮೀರದಲ್ಲಿ ಪ್ರಧಾನಿ ಮೋದಿ(ಸಂಗ್ರಹ ಚಿತ್ರ) ಕಾಶ್ಮೀರದಲ್ಲಿ ಪ್ರಧಾನಿ ಮೋದಿ(ಸಂಗ್ರಹ ಚಿತ್ರ)

ಜಮ್ಮು-ಕಾಶ್ಮೀರ : 'ಜಮ್ಮು-ಕಾಶ್ಮೀರ'ದಲ್ಲಿ ಉಗ್ರರ ದಾಳಿ ಹೆಚ್ಚುತ್ತಿರುವಂತೆಯೇ ಡಿ.8ರಂದು ಚುನಾವಣಾ ರ್ಯಾಲಿಯಲ್ಲಿ ಪಾಲ್ಗೊಳ್ಳಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಲಷ್ಕರ್ ಎ ತೋಯ್ಬಾ ಉಗ್ರ ಸಂಘಟನೆಯಿಂದ ಜೀವ ಬೆದರಿಕೆ ಇರುವುದಾಗಿ ಭದ್ರತಾ ಸಂಸ್ಥೆ&id=16489'>ಭದ್ರತಾ ಸಂಸ್ಥೆ ಎಚ್ಚರಿಕೆ ನೀಡಿದೆ.

ಭದ್ರತಾ ಸಂಸ್ಥೆ&id=16489'>ಭದ್ರತಾ ಸಂಸ್ಥೆಗಳ ಎಚ್ಚರಿಕೆ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರದಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ ತೀವ್ರಗೊಂಡಿದ್ದು, ಇತ್ತೀಚಿನ ವರದಿ ಪ್ರಕಾರ, ತ್ರಾಲ್ ಬಸ್ ನಿಲ್ದಾಣದ ಬಳಿ ಗ್ರೆನೇಡ್ ಸ್ಫೋಟಗೊಂಡಿದೆ. ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ ಹೆಚ್ಚಿದ್ದು ಈ ವರೆಗೂ 10 ಯೋಧರು ಸಾವನ್ನಪ್ಪಿದ್ದು 6 ಉಗ್ರರನ್ನು ಸೇನಾಪಡೆ ಹತ್ಯೆಮಾಡಿದೆ.

ಡಿ.5ರಂದು ಬೆಳಿಗ್ಗೆ ಪ್ರಾರಂಭವಾದ ಉಗ್ರರು-ಯೋಧರ ನಡುವಿನ ಗುಂಡಿನ ದಾಳಿ, ಇನ್ನೂ ಮುಂದುವರೆದಿದೆ. ಜಮ್ಮು-ಕಾಶ್ಮೀರದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯನ್ನು ವಿಫಲಗೊಳಿಸುವುದಾಗಿ ಉಗ್ರರು ಬೆದರಿಕೆ ಹಾಕಿದ್ದರು. ಮೊದಲ ಎರಡು ಹಂತದ ಚುನಾವಣೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆದಿರಲಿಲ್ಲ. ಆದರೆ 3ನೇ ಹಂತದ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗ ಉಗ್ರರ ಉಪಟಳ ಹೆಚ್ಚಾಗಿದೆ.

ಲಷ್ಕರ್-ಎ.ತೋಯ್ಬಾ ಉಗ್ರ ಸಂಘಟನೆ ತನ್ನ ದಾಳಿಯಲ್ಲಿ ಪ್ರಧಾನಿ ಮೋದಿ ಅವರನ್ನು ಗುರಿಯಾಗಿರಿಸಿಕೊಂಡಿದೆ ಈ ಹಿನ್ನೆಲೆಯಲ್ಲಿ ಡಿ.8ರಂದು ನಡೆಯಲಿರುವ ಮೋದಿ ರ್ಯಾಲಿಗೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited