Untitled Document
Sign Up | Login    
Dynamic website and Portals
  
December 6, 2014

ಏಷ್ಯಾದ ವರ್ಷದ ವ್ಯಕ್ತಿಯಾಗಿ ಪ್ರಧಾನಿ ಮೋದಿ ಆಯ್ಕೆ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರಧಾನ ಮಂತ್ರಿ ನರೇಂದ್ರ ಮೋದಿ

ಸಿಂಗಾಪುರ್ : ಪ್ರಧಾನಿ ನರೇಂದ್ರ ಮೋದಿ ಏಷ್ಯಾದ ವರ್ಷದ ವ್ಯಕ್ತಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಸಿಂಗಾಪುರ್ ಪತ್ರಿಕೆಯೊಂದು ನಡೆಸಿದ ಸಮೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪ್ರಧಾನಿ ಮೋದಿ ಗಳಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಅಭಿವೃದ್ಧಿ ಕೇಂದ್ರಿತ ನಾಯಕ ಎಂಬ ಹೆಸರಿನಡಿ ನಡೆಸಿದ ಸಮೀಕ್ಷೆಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರು ಮೊದಲ ಸ್ಥಾನ ಪಡೆದುಕೊಂಡಿದ್ದು, ಅವರನ್ನು ಏಷಿಯಾದ ವರ್ಷದ ವ್ಯಕ್ತಿಯಾಗಿ ಸಿಂಗಪುರದ ದಿನ ಪತ್ರಿಕೆ ಪ್ರಕಟಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ದೇಶವನ್ನು ಅಭಿವೃದ್ಧಿಯತ್ತ ಸಾಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಜಾಗತೀಕ ಮಟ್ಟದಲ್ಲಿ ಭಾರತವನ್ನು ಉನ್ನತ ಮಟ್ಟಕ್ಕೆ ತಲುಪಿಸಿದ್ದಾರೆ. ಉಜ್ವಲ ಭಾರತಕ್ಕಾಗಿ ಬಲವಾದ ಜನಾದೇಶದ ಮೂಲಕ ರಾಷ್ಟ್ರ ನಿರ್ಮಿಸುವಲ್ಲಿ ಮೋದಿ ಅವರು ಯಶಸ್ವಿಯಾಗಿದ್ದಾರೆ ಎಂದು ಪತ್ರಿಕೆಯ ಸಂಪಾದಕ ವಾರೆನ್ ಫೆರ್ನಾಂಡೀಸ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅಲ್ಲದೆ ದೇಶ ಅಭಿವೃದ್ದಿಯಲ್ಲಿ ಮೋದಿ ಅವರ ದೂರದೃಷ್ಟಿ ಆರ್ಥಿಕ ಯೋಜನೆಗಳು ಸಹಾ ಇತರರಿಗೆ ಮಾದರಿಯಾಗುವಂತೆ ಮಾಡಿದೆ. ಹೀಗೆ ಹತ್ತು ಹಲವು ಅಂಶಗಳ ಆಧಾರದ ಮೇಲೆ ಪ್ರಧಾನಿ ನರೇಂದ್ರ ಮೋದಿ ಅವರನ್ನು 'ಏಷ್ಯಾದ ವರ್ಷದ ವ್ಯಕ್ತಿ' ಪ್ರಶಸ್ತಿಗೆ ಸಿಂಗಾಪುರ್ ಪತ್ರಿಕೆ ಆಯ್ಕೆ ಮಾಡಿದೆ. ಪ್ರತಿ ವರ್ಷ ನೀಡುವ ಈ ಪ್ರಶಸ್ತಿಯನ್ನು ಕಳೆದ ವರ್ಷ ಚೀನಾ ಅಧ್ಯಕ್ಷ ಕ್ಸಿ ಜಿಂಗ್‌ಪಿಂಗ್ ಹಾಗೂ ಜಪಾನಿನ ಪ್ರಧಾನಿ ಶಿನ್ಜೋ ಅಬೆ ಇಬ್ಬರು ಈ ಪ್ರಶಸ್ತಿಯನ್ನು ಹಂಚಿಕೊಂಡಿದ್ದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited