Untitled Document
Sign Up | Login    
Dynamic website and Portals
  
December 6, 2014

ಜನಾರ್ದನ ರೆಡ್ಡಿಗೆ ಮತ್ತೊಂದು ಪ್ರಕರಣದಲ್ಲಿ ಜಾಮೀನು ಮಂಜೂರು

ಜನಾರ್ದನ ರೆಡ್ಡಿ ಜನಾರ್ದನ ರೆಡ್ಡಿ

ಬೆಂಗಳೂರು : ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಜನಾರ್ದನ ರೆಡ್ಡಿಯವರಿಗೆ ಮತ್ತೊಂದು ಪ್ರಕರಣದಲ್ಲಿ ಜಾಮೀನು ಸಿಕ್ಕಿದೆ. ಈ ಮೂಲಕ ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧ ಜೈಲು ಪಾಲಾಗಿರುವ ಜನಾರ್ದನ ರೆಡ್ಡಿ ಅವರು ಜೈಲನಿಂದ ಬಿಡುಗಡೆಯಾಗುವ ಕಾಲ ಸನ್ನಿಹಿತವಾದಂತಾಗಿದೆ ಎಂದೇ ಹೇಳಬಹುದು.

ಬೆಂಗಳೂರಿನ ಸಿಬಿಐ ವಿಶೇಷ ನ್ಯಾಯಾಲಯ ಜನಾರ್ದನ ರೆಡ್ಡಿ ವಿರುದ್ಧದ ಐದನೇ ಪ್ರಕರಣದಲ್ಲೂ ಜಾಮೀನು ಮಂಜೂರು ಮಾಡಿದ್ದು, ಇದರೊಂದಿಗೆ ಕರ್ನಾಟಕದ ಎಲ್ಲಾ ಪ್ರಕರಣಗಳಲ್ಲೂ ರೆಡ್ಡಿಗೆ ಜಾಮೀನು ದೊರೆತಂತಾಗಿದೆ. ಇನ್ನು ಒಂದು ಪ್ರಕರಣದಲ್ಲಿ ಮಾತ್ರ ಜಾಮೀನು ದೊರೆತರೆ ಜನಾರ್ದನ ರೆಡ್ಡಿ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಕೂಡ್ಲಿಗಿ ಶಾಸಕ ನಾಗೇಂದ್ರ ಸೇರಿದಂತೆ ರೆಡ್ಡಿ ಆಪ್ತರಾದ ಕಾರದಪುಡಿ ಮಹೇಶ್, ಅಲಿಖಾನ್ ಸೇರಿದಂತೆ 10 ಮಂದಿಗೆ ಸಿಬಿಐ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.


ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ರೆಡ್ಡಿ ವಿರುದ್ಧ ಒಟ್ಟು 5 ಪ್ರಕರಣಗಳು ದಾಖಲಾಗಿದ್ದವು. ಈಗಾಗಲೇ ಐದು ಪ್ರಕರಣಗಳಲ್ಲೂ ಜಾಮೀನು ಪಡೆದಿರುವ ರೆಡ್ಡಿ, ಒಎಂಸಿ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆಯಬೇಕಿದೆ. ಈ ಪ್ರಕರಣದ ಜಾಮೀನು ಅರ್ಜಿ ವಿಚಾರಣೆ ಡಿಸೆಂಬರ್ 16ರಂದು ನಡೆಯಲಿದೆ.


2011 ಸೆಪ್ಟೆಂಬರ್ 5ರಂದು ಸಿಬಿಐ ಅಧಿಕಾರಿಗಳಿಂದ ಬಂಧನಕ್ಕೀಡಾಗಿದ್ದ ಜನಾರ್ಧನ ರೆಡ್ಡಿ ವಿರುದ್ಧ ಒಟ್ಟು 7 ಪ್ರಕರಣಗಳ ದಾಖಲಾಗಿದ್ದು, ಈ ಪೈಕಿ ರಾಜ್ಯದ 5 ಪ್ರಕರಣಗಳು ಸೇರಿದಂತೆ ಒಟ್ಟು 6 ಪ್ರಕರಣಗಳಲ್ಲಿ ರೆಡ್ಡಿಗೆ ಜಾಮೀನು ದೊರೆತಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited