Untitled Document
Sign Up | Login    
Dynamic website and Portals
  
December 7, 2014

ಡಿ.10 ರಂದು ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ

ನವದೆಹಲಿ : ಡಿಸೆಂಬರ್ 10ರಂದು ರಷ್ಯಾ ಅಧ್ಯಕ್ಷ ವ್ಲಾಡಿಮರ್ ಪುಟಿನ್, ಭಾರತಕ್ಕೆ ಆಗಮಿಸುವುದರ ಬಗ್ಗೆ ವಿದೇಶಾಂಗ ಸಚಿವಾಲಯ ಖಚಿತ ಪಡಿಸಿದೆ.

ಡಿಸೆಂಬರ್ 10 ಮತ್ತು 11 ರಂದು 15ನೇ ಭಾರತ-ರಷ್ಯಾ ವಾರ್ಷಿಕ ಸಮ್ಮೇಳನಕ್ಕೆ ಭಾಗವಹಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮರ್ ಪುಟಿನ್ ನವದೆಹಲಿಗೆ ಭೇಟಿ ನೀಡಲಿದ್ದಾರೆ.

ಭೇಟಿಯ ವೇಳೆ ಉಭಯ ದೇಶಗಳ ನಡುವಿನ ಅಣುಶಕ್ತಿ ಸಂಬಂಧಿತ ವಿಚಾರ ಸೇರಿದಂತೆ ಮಹತ್ವದ ವಿಷಯಗಳ ಕುರಿತು ಒಪ್ಪಂದಗಳನ್ನು ಮಾಡಿಕೊಳ್ಳುವ ಸಾಧ್ಯತೆಗಳಿವೆ. ಅಲ್ಲದೆ ಉಭಯದ ದೇಶಗಳ ಸೌಹಾರ್ದಯುತ ಸಂಬಂಧವನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ವಜ್ರ ಉದ್ಯಮಕ್ಕೆ ಸಂಬಂಧಿತ ಒಪ್ಪಂದಕ್ಕೂ ಸಹಿ ಹಾಕಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಭೇಟಿಯ ಸಂದರ್ಭದಲ್ಲಿ ಪುಟಿನ್ ಸಂಸತ್ ಕಲಾಪದಲ್ಲೂ ಭಾಗವಹಿ ವಿಶೇಷ ಭಾಷಣ ಮಾಡಲಿದ್ದಾರೆ. ಈ ಹಿಂದೆ 2010ರಂದು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಸಹಾ ದೇಶದ ಸಂಸತ್ತಿನ ಚಳಿಗಾಲದ ವಿಶೇಷ ಅಧಿವೇಶನದಲ್ಲಿ ಭಾಗವಹಿಸಿ ಭಾಷಣ ಮಾಡಿದ್ದರು.

ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಪ್ರಪ್ರಥಮವಾಗಿ ಬ್ರಿಕ್ಸ್ ಸಮಾವೇಶದಲ್ಲಿ ಭಾಗವಹಿಸಿದ್ದ ವೇಳೆ, ಪುಟಿನ್ ಅವರನ್ನು ಭೇಟಿ ಮಾಡಿ ಭಾರತಕ್ಕೆ ಆಹ್ವಾನಿಸಿದ್ದರು.
ಮೋದಿ ಅವರ ಆಹ್ವಾನವನ್ನು ಪುಟಿನ್ ಸ್ವೀಕರಿಸಿದ್ದು, ಭಾರತಕ್ಕೆ ಭೇಟಿ ನೀಡಲು ಒಪ್ಪಿಗೆ ಸೂಚಿಸಿದ್ದಾರೆ.

2 ದಿನಗಳ ಭೇಟಿಯ ವೇಳೆ ಭಾರತದ ಪ್ರಮುಖ ಪ್ರವಾಸಿ ತಾಣಗಳನ್ನು ಪುಟಿನ್ ವೀಕ್ಷಿಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited