Untitled Document
Sign Up | Login    
Dynamic website and Portals
  
December 9, 2014

ಜಮ್ಮು-ಕಾಶ್ಮೀರ ಹಾಗೂ ಜಾರ್ಖಂಡ್ ನಲ್ಲಿ 3ನೇ ಹಂತದ ಮತದಾನ

ಶ್ರೀನಗರ : ಜಮ್ಮು-ಕಾಶ್ಮೀರದ 16 ಕ್ಷೇತ್ರಗಳಲ್ಲಿ ಮತ್ತು ಜಾರ್ಖಂಡ್‌ನ‌ 17ಕ್ಷೇತ್ರಗಳಲ್ಲಿ ಮೂರನೇ ಹಂತದ ಮತದಾನ ಶಾಂತಿಯುತವಾಗಿ ಬಿರುಸಿನಿಂದ ನಡೆಯುತ್ತಿದೆ.

ಬೆಳಗ್ಗೆ 8 ಗಂಟೆಯಿಂದ ಮತದಾನ ಆರಂಭವಾಗಿದ್ದು ಸಂಜೆ 4 ಗಂಟೆಯ ವರೆಗೆ ನಡೆಯಲಿದೆ.

ಜಮ್ಮು-ಕಾಶ್ಮೀರದಲ್ಲಿ ಮತದಾರರು ಉತ್ಸಾಹದಿಂದ ಮತಗಟ್ಟೆಗಳಿಗೆ ಬರುತ್ತಿದ್ದು, ಹೆಚ್ಚಿನ ಮತಗಟ್ಟೆಗಳಲ್ಲಿ ಉದ್ದನೆಯ ಸಾಲುಗಳು ಕಂಡು ಬಂದಿವೆ ಎಂದು ವರದಿಯಾಗಿದೆ. ಬೆಳಿಗ್ಗೆ 10.45 ರ ವರೆಗೆ ಯಾವುದೇ ಅಹಿತಕರ ಘಟನೆ ನಡೆದ ಬಗ್ಗೆ ವರದಿಯಾಗಿಲ್ಲ.

ಉಗ್ರರು ಮತ್ತು ನಕ್ಸಲರ ದಾಳಿ ಭೀತಿ ಇರುವುದರಿಂದ ಭಾರೀ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ.

ಜಾರ್ಖಂಡ್‌ನ‌ 17 ಕ್ಷೇತ್ರಗಳಲ್ಲಿ 289 ಅಭ್ಯರ್ಥಿಗಳು ಮತ್ತು ಜಮ್ಮು-ಕಾಶ್ಮೀರದ 16 ಕ್ಷೇತ್ರಗಳಲ್ಲಿ 144 ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited