Untitled Document
Sign Up | Login    
Dynamic website and Portals
  
December 9, 2014

ಸದನದಲ್ಲಿ ಕಬ್ಬು ಬೆಳೆಗಾರರ ಸಮಸ್ಯೆ ಪ್ರತಿಧ್ವನಿ: ಕಲಾಪ ಮುಂದೂಡಿಕೆ

ಬೆಳಗಾವಿ : ವಿಧಾನಮಂಡಲ ಅಧಿವೇಶ ಆರಂಭವಾದ ಮೊದಲನ್ ದಿನವೇ ರಾಜ್ಯ ಸರ್ಕಾರ ವಿಪಕ್ಷಗಳ ಪ್ರತಿಭಟನೆ ಎದುರಿಸಬೇಕಾಯಿತು. ಸದನದಲ್ಲಿ ಗದ್ದಲ-ಕೋಲಾಲ ಆರಂಭವಾಗಿ ಕಲಾಪವನ್ನು ಮುಂದೂಡಲಾಯಿತು.

ಕಬ್ಬು ಬೆಳೆಗಾರರ ಸಮಸ್ಯೆ, ಕಳಂಕಿತ ಸಚಿವರ ರಾಜೀನಾಮೆಗೆ ಸಂಬಂಧಿಸಿದಂತೆ ನಿಲುವಳಿ ಸೂಚನೆಯಡಿ ಚರ್ಚೆಗೆ ಅವಕಾಶ ಕೋರಿದ ಪ್ರತಿಪಕ್ಷ ಬಿಜೆಪಿ ಪ್ರಸ್ತಾಪಿಸಿದ ವಿಷಯ ಸದನದಲ್ಲಿ ಪ್ರತಿಧ್ವನಿಸಿ ಗದ್ದಲ-ಕೋಲಾಹಲ ಉಂಟಾಗಿ ಆಡಳಿತ ಪಕ್ಷಗಳ ಸದಸ್ಯರ ನಡುವೆ ಪರಸ್ಪರ ವಾಕ್ ಸಮರಕ್ಕೆ ಕಾರಣವಾಯಿತು. ಈ ಹಿನ್ನಲೆಯಲ್ಲಿ ಸದನವನ್ನು ಮುಂದೂಡಿದ ಪ್ರಸಂಗ ವಿಧಾನಸಭೆಯಲ್ಲಿ ನಡೆಯಿತು.

ಸಂತಾಪ ಸೂಚನೆ ನಂತರ ಕಲಾಪ ಪ್ರಾರಂಭವಾದಾಗ ಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಪ್ರಶ್ನೋತ್ತರ ಕಲಾಪ ಕೈಗೆತ್ತಿಕೊಳ್ಳಲು ಮುಂದಾದಾಗ, ಪ್ರತಿಪಕ್ಷದ ನಾಯಕ ಜಗದೀಶ್ ಶೆಟ್ಟರ್ ಕಬ್ಬು ಬೆಳೆಗಾರರ ಸಮಸ್ಯೆ ಗಂಭೀರವಾಗಿದ್ದು, ಈ ಬಗ್ಗೆ ನಿಲುವಳಿ ಸೂಚನೆ ಪೂರ್ವಭಾವಿ ಪ್ರಸ್ತಾವನೆಗೆ ಅವಕಾಶ ಕಲ್ಪಿಸಬೇಕೆಂದು ಆಗ್ರಹಿಸಿದರು. ಇದಕ್ಕೆ ಜೆಡಿಎಸ್ ಸದಸ್ಯರು ಕೈ ಜೋಡಿಸಿದರು.

ಕಬ್ಬು ಬೆಳೆಗಾರರ ಬಾಕಿ ಪಾವತಿ ಮಾಡಬೇಕಾಗಿದೆ. ಈ ಬಗ್ಗೆ ಸದನದಲ್ಲಿ ಚರ್ಚೆ ನಡೆಸಿ ನಿರ್ಣಯ ಕೈಗೊಳ್ಳೋಣ ಎಂದು ಬಿಜೆಪಿ, ಜೆಡಿಎಸ್ ಸದಸ್ಯರು ನಿಲುವಳಿ ಸೂಚನೆ ಚರ್ಚೆಗೆ ಅವಕಾಶ ಕೋರಿದರು.

ಈ ಸಂದರ್ಭದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಸದಸ್ಯರ ನಡುವೆ ವಾಕ್ಸಮರ ನಡೆಯಿತು. ಕಳಂಕಿತ ಸಚಿವರು ರಾಜೀನಾಮೆ ನೀಡಬೇಕೆಂದು ಬಿಜೆಪಿಯ ಕೆಲ ಮುಖಂಡರು ಆಗ್ರಹಿಸಿದರು. ಇದಕ್ಕೆ ಕಾಂಗ್ರೆಸ್‌ನ ಶಾಸಕರು ಬಿಜೆಪಿಯವರ ವಿರುದ್ಧ ಹರಿಹಾಯ್ದರು.

ಸದನದಲ್ಲಿ ಗದ್ದಲ-ಗೊಂದಲದ ವಾತಾವರಣ ಸೃಷ್ಟಿಯಾಯಿತು. ಪ್ರಶ್ನೋತ್ತರ ಕಲಾಪ ನಡೆಸಿದ ನಂತರ ನಿಲುವಳಿ ಸೂಚನೆ ಬಗ್ಗೆ ತೀರ್ಮಾನ ಕೈಗೊಳ್ಳೋಣ ಎಂದು ಸ್ಪೀಕರ್ ಹೇಳಿದರು. ಇದನ್ನು ವಿರೋಧಿಸಿ ಪ್ರತಿಪಕ್ಷ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟಿಸಿದರು. ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಈ ಸಂದರ್ಭದಲ್ಲಿ ಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಸದನವನ್ನು ಕೆಲಕಾಲ ಮುಂದೂಡಿದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited