Untitled Document
Sign Up | Login    
Dynamic website and Portals
  
December 10, 2014

ಕೇಂದ್ರದಿಂದ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಭಾರತ ರತ್ನ ಪ್ರಶಸ್ತಿ?

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ

ನವದೆಹಲಿ : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನವನ್ನು ಉತ್ತಮ ಆಡಳಿತ ದಿನವನ್ನಾಗಿ ಘೋಷಿಸಿರುವ ನರೇಂದ್ರ ಮೋದಿ ಸರ್ಕಾರ ಅಟಲ್ ಬಿಹಾರಿ ವಾಪಪೇಯಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವ ಸಾಧ್ಯತೆ ಇದೆ.

ಪ್ರಸಕ್ತ ವರ್ಷದ ಡಿ.25ರಂದು ವಾಜಪೇಯಿ ಅವರ 90ನೇ ವರ್ಷದ ಜನ್ಮದಿನವಾಗಿದ್ದು, ಮೋದಿ ಸರ್ಕಾರ ಭಾರತ ರತ್ನ ಪ್ರಶಸ್ತಿ ಘೋಷಿಸುವ ಸಾಧ್ಯತೆ ದಟ್ಟವಾಗಿದೆ.

ಈ ಬಗ್ಗೆ ಡಿ.25ರಂದೇ ಅಧಿಕೃತ ಘೋಷಣೆ ಹೊರಬೀಳುವ ಸಾಧ್ಯತೆ ಇದೆ ಎಂದೂ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ವರದಿಗಳ ಪ್ರಕಾರ, ಜ.26ರಂದು, ಗಣರಾಜ್ಯೋತ್ಸವ ದಿನದಂದು ವಾಜಪೇಯಿ ಅವರಿಗೆ ದೇಶದ ಅತ್ಯುನ್ನತ ಪ್ರಶಸ್ತಿಯನ್ನು ನೀಡಲಾಗುತ್ತದೆ ಎಂದು ತಿಳಿದುಬಂದಿದೆ.

ಇತ್ತೀಚೆಗಷ್ಟೇ ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕೆಂಬ ಒತ್ತಾಯ ಕೇಳಿಬಂದಿತ್ತು.

ಕಳೆದ ವರ್ಷ ಯುಪಿಎ ಸರ್ಕಾರ, ವಿಜ್ನಾನಿ ಸಿ.ಎನ್.ಆರ್ ರಾವ್, ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿತ್ತು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited