Untitled Document
Sign Up | Login    
Dynamic website and Portals
  
December 10, 2014

ಜಮ್ಮು-ಕಾಶ್ಮೀರದ ಜಾತ್ಯಾತೀತ ಗುಣ ಉಳಿಸಲು ಕಾಂಗ್ರೆಸ್ ಗೆ ಮತ ನೀಡಿ: ಸೋನಿಯಾ ಗಾಂಧಿ

ಸೋನಿಯಾ ಗಾಂಧಿ ಸೋನಿಯಾ ಗಾಂಧಿ

ಜಮ್ಮು-ಕಾಶ್ಮೀರ : 'ಜಮ್ಮು-ಕಾಶ್ಮೀರ'ದಲ್ಲಿ ಜನಪರ ಯೋಜನೆಗಳನ್ನು ಜಾರಿ ಮಾಡದೇ ಇರುವುದಕ್ಕೆ ನ್ಯಾಷನಲ್ ಕಾನ್ಫರೆನ್ಸ್ ನೊಂದಿಗಿನ ಮೈತ್ರಿ ಸರ್ಕಾರವೇ ಕಾರಣ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ.

ಡಿ.10ರಂದು ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಿ ಚುನಾವಣಾ ಪ್ರಚಾರ ಕೈಗೊಂಡ ಸೋನಿಯಾ ಗಾಂಧಿ, ರಾಜ್ಯದಲ್ಲಿ ಜನಪರ ಯೋಜನೆಗಳನ್ನು ಜಾರಿಯಾಗದೇ ಇರುವುದಕ್ಕೆ ಎನ್.ಸಿಯೊಂದಿಗಿನ ಮೈತ್ರಿಯೇ ಕಾರಣ ಎಂದು ಆರೋಪಿಸಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಜನರ ಆಶೋತ್ತರಗಳನ್ನು ನಾವು ಈಡೇರಿಸಲು ಸಾಧ್ಯವಾಗಿಲ್ಲ ಎಂಬುದನ್ನು ಒಪ್ಪಿಕೊಳ್ಳುತ್ತೇವೆ. ಆದರೆ ಇದಕ್ಕೆ ಕಾಂಗ್ರೆಸ್ ಕಾರಣವಲ್ಲ, ಎನ್.ಸಿ ಕಾರಣ ಎಂದು ಸೋನಿಯಾ ಗಾಂಧಿ ಆರೋಪಿಸಿದ್ದಾರೆ. ಆದರೆ ಜಮ್ಮು-ಕಾಶ್ಮೀರದ ಅಭಿವೃದ್ಧಿಗಾಗಿ ಕಾಂಗ್ರೆಸ್ ಬದ್ಧವಾಗಿದೆ. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವಂತೆ ಮನವಿ ಮಾಡಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಪ್ರವಾಹ ಉಂಟಾದಾಗ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸಂತ್ರಸ್ತರಿಗೆ ಸಹಾಯ ಮಾಡಿದ್ದಾರೆ. ಕಾಶ್ಮೀರದ ಜಾತ್ಯಾತೀತತೆ ಗುಣ ಮುಂದುವರೆಯಬೇಕಾದರೆ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ಥಿತ್ವಕ್ಕೆ ಬರಬೇಕೆಂದು ಸೋನಿಯಾ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited