Untitled Document
Sign Up | Login    
Dynamic website and Portals
  
December 11, 2014

ಭಾರತಕ್ಕೆ ಆಗಮಿಸಿದ ರಷ್ಯಾ ಅಧ್ಯಕ್ಷ: 20 ಒಪ್ಪಂದಗಳಿಗೆ ಸಹಿ ಸಾಧ್ಯತೆ

ನವದೆಹಲಿ : ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ತಡರಾತ್ರಿ ಭಾರತಕ್ಕೆ ಆಗಮಿಸಿದ್ದು, ಡಿ.11ರಂದು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದ್ವಿಪಕ್ಷಿಯ ಮಾತುಕತೆ ನಡೆಸಲಿದ್ದಾರೆ.

ಒಂದು ದಿನದ ಮಟ್ಟಿಗೆ ದೆಹಲಿಗೆ ಭೇಟಿ ನೀಡಿರುವ ಪುಟಿನ್ ಅವರು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ದ್ವಿಪಕ್ಷಿಯ ಮಾತುಕತೆಯ ಬಳಿಕ ಉಭಯ ರಾಷ್ಟ್ರಗಳ ನಾಯಕರು ಸುಮಾರು 20 ಒಪ್ಪಂದಗಳಿಗೆ ಸಹಿ ಹಾಕುವ ಸಾಧ್ಯತೆ ಇದೆ.

ವಿಶೇಷವಾಗಿ ಸ್ಮಾರ್ಟ್ ಸಿಟಿ ಅಭಿವೃದ್ಧಿ ಯೋಜನೆಯಲ್ಲಿ ಪಾಲುದಾರನಾಗಲು ರಷ್ಯಾ ಮುಂದಾಗಿದ್ದು, ಇದರ ಜತೆಗೆ ಹೊಸ ಪರಮಾಣು ಸ್ಥಾವರಗಳ ಸ್ಥಾಪನೆ, ಸೇನಾ ಹಾಗೂ ತಾಂತ್ರಿಕ ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರ ಕುರಿತಂತೆ ಮಹತ್ವದ ಒಪ್ಪಂದಗಳಿಗೆ ನರೇಂದ್ರ ಮೋದಿ ಅವರು ಸಹಿ ಹಾಕಲಿದ್ದಾರೆ.

ಪ್ರಧಾನಿ ಮೋದಿಯವರ ಸ್ಮಾರ್ಟ್ ಸಿಟಿ ಕನಸು ಸಾಕಾರಕ್ಕೆ ಅಗತ್ಯವಾದ ತಂತ್ರಜ್ಞಾನವನ್ನು ನೀಡುವ ಜೊತೆಗೆ, ರಕ್ಷಣಾ ಇಲಾಖೆಗೆ ಹೊಸ ಸುಧಾರಿತ ಹೆಲಿಕಾಪ್ಟರ್‌ಗಳನ್ನು ನಿರ್ಮಿಸಲು ಅಗತ್ಯವಾದ ತಾಂತ್ರಿಕ ನೆರೆವನ್ನೂ ರಷ್ಯಾ ನೀಡಲಿದೆ. ಅಲ್ಲದೆ ಭಾರತದಲ್ಲಿ 20ರಿಂದ 24 ಪರಮಾಣು ವಿದ್ಯುತ್ ಘಟಕಗಳನ್ನು ನಿರ್ಮಿಸಲು ರಷ್ಯಾ ಆಸಕ್ತಿ ಹೊಂದಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited