Untitled Document
Sign Up | Login    
Dynamic website and Portals
  
December 12, 2014

ಕಲ್ಬುರ್ಗಿ ಶೂಟೌಟ್ ಪ್ರಕರಣ: ಆರೋಪಿಗಳ ಬಂಧನ

ಕಲಬುರ್ಗಿ : 'ಕಲಬುರ್ಗಿ' ಕಾಂಗ್ರೆಸ್ ಮುಖಂಡ ಮಹಮ್ಮದ್ ಶಬ್ಬೀರ್ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಕಲಬುರಗಿ ಪೊಲೀಸರು ಬಂಧಿಸಿದ್ದಾರೆ.

ರೆಹಮಾನ್, ಮೊಹಮದ್ ಇರ್ಫಾನ್, ಶೇಖ್ ಮೋಬಿನ ಬಂಧಿತ ಆರೋಪಿಗಳಾಗಿದ್ದು ಅವರಿಂದ ನಾಡಪಿಸ್ತೂಲ್, ಮಾರಕಾಸ್ತ್ರ ಹಾಗೂ ತವೇರಾ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಲಬುರಗಿ ಜೈಲಿನಲ್ಲಿರುವ ಶಂಶೀರ್ ಎಂಬುವವನು ಈ ಕೊಲೆಗೆ ಸಂಚು ರೂಪಿಸಿದ್ದ ಎಂದು ತಿಳಿದು ಬಂದಿದ್ದು, ವಿಶ್ವವಿದ್ಯಾಲಯ ಪೊಲೀಸ್ ಠಾಣೆ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.

ಡಿ.9ರ ಬೆಳಗ್ಗೆ ನಗರದ ರೇಡಿಯೋ ಸ್ಟೇಷನ್ ಬಳಿ ಕಾಂಗ್ರೆಸ್ ಮುಖಂಡ ಮಹಮ್ಮದ್ ಶಬ್ಬೀರ್ ಹಾಗೂ ಅವರ ಸ್ನೇಹಿತರು ಬೈಕ್‌ನಲ್ಲಿ ತೆರಳುತ್ತಿದ್ದಾಗ, ತವೇರಾ ವಾಹನದಲ್ಲಿ ಬಂದಿದ್ದ 5ಕ್ಕೂ ಹೆಚ್ಚು ದುಷ್ಕರ್ಮಿಗಳು ಮೂರು ಬೈಕ್‌ಗಳಿಗೆ ಡಿಕ್ಕಿ ಹೊಡೆದು, ಗುಂಡಿನ ದಾಳಿ ನಡೆಸಿ ಕಾಂಗ್ರೆಸ್ ಮುಖಂಡನನ್ನು ಹತ್ಯೆಗೈದಿದ್ದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Crime

ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಬೆಂಗಳೂರಿನ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
  • ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿದ ಎಸ್ ಐ ಟಿ
  • ಸೈನೈಡ್ ಮೋಹನ್ ಗೆ ಜೀವಾವಧಿ ಜೈಲು ಶಿಕ್ಷೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited