Untitled Document
Sign Up | Login    
Dynamic website and Portals
  
December 13, 2014

ಇಸಿಸ್ ಟ್ವಿಟರ್ ಖಾತೆ ಹೊಂದಿದ್ದ ಉಗ್ರನ ಬಂಧನ

ಬೆಂಗಳೂರು : ಇಸ್ಲಾಮಿಕ್ ಸ್ಟೇಟ್ ಇನ್ ಇರಾಕ್ ಅಂಡ್ ಸಿರಿಯಾ ಉಗ್ರ ಸಂಘಟನೆಯ ಹೆಸರಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ದೇಶದ್ರೋಹಿ ಸಂದೇಶಗಳನ್ನು ಹಾಕುತ್ತಿದ್ದ ಟ್ವಿಟರ್ ಖಾತೆದಾರನನ್ನು ಬಂಧಿಸಲಾಗಿದೆ.

ಉಗ್ರನ ಕುರಿತು ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದಂತೆಯೇ ಕಾರ್ಯಪ್ರವೃತ್ತರಾದ ಪೊಲೀಸರು ಬೆಂಗಳೂರಿನ ಜಾಲಹಳ್ಳಿಯಲ್ಲಿ ಬಂಧಿಸಿದ್ದಾರೆ. ಇಸಿಸ್ ಹೆಸರಲ್ಲಿ ಪ್ರಕಟವಾಗುತ್ತಿದ್ದ ಟ್ವಿಟರ್ ಖಾತೆಯ ಹಿಂದೆ ಬೆಂಗಳೂರು ಮೂಲದ ವ್ಯಕ್ತಿಯ ಕೈವಾಡವಿದೆ ಎಂದು ಬ್ರಿಟನ್ ಮೂಲದ ಚಾನೆಲ್ 4' ನ್ಯೂಸ್ ಸುದ್ದಿವಾಹಿನಿ ವರದಿ ಪ್ರಸಾರ ಮಾಡಿತ್ತು.

ಬೆಂಗಳೂರಿನಲ್ಲಿದ್ದು ಕೊಂಡೇ ಶಮಿವಿಟ್ನೆಸ್ ಎಂಬ ಹೆಸರಿನಲ್ಲಿ ಟ್ವಿಟರ್ ಖಾತೆಯನ್ನು ತೆರೆದಿದ್ದ ವ್ಯಕ್ತಿಯೋರ್ವ ಟ್ವಿಟರ್ ಮೂಲಕ ದೇಶವಿದ್ರೋಹ ಸಂದೇಶಗಳನ್ನು ಹಾಗೂ ಇಸಿಸ್ ಪರವಾದ ಇಸ್ಲಾಂ ಸೈದ್ಧಾಂತಿಕ ನಿಲುವುಗಳನ್ನು ಪಸರಿಸಿ ವಿಶ್ವಾದಾದ್ಯಂತ ಇಸ್ಲಾಂ ಯುವಕರನ್ನು ತಮ್ಮ ಸಂಘಟನೆಗೆ ಸೇರುವಂತೆ ಪ್ರೇರೇಪಿಸುತ್ತಿದ್ದನು ಎಂದು ವಾಹಿನಿ ಆರೋಪಿಸಿತ್ತು. ವಾಹಿನಿ ಈಗಾಗಲೇ ಶಮಿ ವಿಟ್ನೆಸ್ ಖಾತೆ ನಿವರ್ಹಿಸುತ್ತಿದ್ದ ಮೆಹ್ದೀ ಎಂಬ ವ್ಯಕ್ತಿಯನ್ನು ಸಂದರ್ಶಿಸಿದ್ದು, ಖಾತೆಯ ನಿರ್ವಹಣೆ ಕುರಿತಂತೆ ಆತ ಕೆಲ ವಿಚಾರಗಳನ್ನು ಹೇಳಿದ್ದಾನೆ ಎಂದು ಸುದ್ದಿ ಪ್ರಸಾರದಲ್ಲಿ ಹೇಳಿಕೊಂಡಿತ್ತು.

ಪ್ರಕರಣದ ಕುರಿತಂತೆ ತನಿಖೆ ಕೈಗೊಂಡಿದ್ದ ಬೆಂಗಳೂರು ಪೊಲೀಸರು ಆರೋಪಿಯನ್ನು ಬಂಧಿಸುವ ಸಲುವಾಗಿ ಎನ್‌ಐಎ ಮತ್ತು ಐಬಿ ಕೇಂದ್ರ ಭದ್ರತಾ ಸಂಸ್ಥೆಗಳನ್ನು ಸಂಪರ್ಕಿಸಿತ್ತು. ಈ ಸಂಸ್ಥೆಗಳ ಸಹಾಯದಿಂದ ದೇಶವಿದ್ರೋಹಿ ಸಂದೇಶ ರವಾನಿಸುತ್ತಿದ್ದ ಮೆಹ್ದೀಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್.ರೆಡ್ಡಿ ತಿಳಿಸಿದ್ದಾರೆ.

ಪ್ರತೀ ತಿಂಗಳು ಈತ ಸುಮಾರು 2 ಮಿಲಿಯನ್ ಪ್ರಚೋದನಕಾರಿ ಸಂದೇಶಗಳನ್ನು ಟ್ವಿಟರ್ ಖಾತೆಗೆ ಹಾಕುತ್ತಿದ್ದನು. ಇಸಿಸ್ ಉಗ್ರ ಸಂಘಟನೆಯನ್ನು ಬೆಂಬಲಿಸುತ್ತಿರುವ ವಿಶ್ವಾದ್ಯಂತ ವಿವಿಧ ಪ್ರದೇಶಗಳಲ್ಲಿ ನೆಲೆಗೊಂಡಿರುವ ಸುಮಾರು 17, 700 ಮಂದಿ ಖಾತೆಯನ್ನು ಪ್ರತಿ ನಿತ್ಯ ವೀಕ್ಷಿಸುತ್ತಿದ್ದರು ಮತ್ತು ಆಯಾ ದೇಶಗಳ ಕುರಿತ ಸುದ್ದಿ ಸಮಾಚಾರಗಳನ್ನು ಚರ್ಚೆ ನಡೆಸುತ್ತಿದ್ದರು ಎಂದು ಚಾನೆಲ್ 4 ಸುದ್ದಿವಾಹಿನಿ ಹೇಳಿದೆ.

ಇಸಿಸ್ ಉಗ್ರ ಸಂಘಟನೆಯ ಹೆಸರಲ್ಲಿ ಶಮಿವಿಟ್ನೆಸ್ ಎಂಬ ಟ್ವಿಟರ್ ಖಾತೆ ನಿರ್ವಹಿಸುತ್ತಿದ್ದ ಮೆಹ್ದೀ ಮೂಲತಃ ಬೆಂಗಳೂರಿನ ಖಾಸಗಿ ಸಂಸ್ಥೆಯ ಉದ್ಯೋಗಿಯಂತೆ. ಸಂಸ್ಥೆಯಲ್ಲಿ ಉನ್ನತ ಹುದ್ದೆ ಹೊಂದಿದ್ದರೂ, ರಹಸ್ಯವಾಗಿ ಇಸ್ಲಾಮಿಕ್ ಸ್ಟೇಟ್ ಪರ ಕೆಲಸ ಮಾಡುತ್ತಿದ್ದಾನೆ. 2013ರಲ್ಲಿ ಶಮಿವಿಟ್ನೆಸ್ ಟ್ವಿಟರ್ ಖಾತೆಯನ್ನು ಮೆಹ್ದೀ ತೆರೆದಿದ್ದು, ಜಿಹಾದಿ ಕುರಿತ ಲೇಖನಗಳನ್ನು ಪ್ರಕಟಿಸುವ ಮೂಲಕ ಈ ಖಾತೆ ಭಾರಿ ಸುದ್ದಿಗೆ ಗ್ರಾಸವಾಗಿತ್ತು.

ಅಲ್ಲದೆ ಸಿರಿಯಾದ ಬಿಲಾದ್-ಅಲ್-ಶಾಮ್, ಜಿಹಾದಿ, ಆರ್ಥಿಕ ಬಿಕ್ಕಟ್ಟು, ತಂತ್ರಜ್ಞಾನ, ಇತಿಹಾಸಗಳ ಬಗ್ಗೆ ಬರೆಯುತ್ತಿದ್ದನು. ಇದಲ್ಲದೇ ಇರಾಕ್ ಮತ್ತು ಸಿರಿಯಾದಲ್ಲಿ ಆರಂಭಗೊಂಡಿರುವ ಬಿಕ್ಕಟ್ಟಿನ ಕುರಿತಂತೆ ಲೇಖನಗಳನ್ನು ಪ್ರಕಟಿಸುತ್ತಿದ್ದನು ಮತ್ತು ಇಸಿಸ್ ಸೇರುವಂತೆ ಯುವಕರನ್ನು ಪ್ರೇರೇಪಿಸುತ್ತಿದ್ದನು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Crime

ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಬೆಂಗಳೂರಿನ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
  • ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿದ ಎಸ್ ಐ ಟಿ
  • ಸೈನೈಡ್ ಮೋಹನ್ ಗೆ ಜೀವಾವಧಿ ಜೈಲು ಶಿಕ್ಷೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited