Untitled Document
Sign Up | Login    
Dynamic website and Portals
  
December 15, 2014

ಉತ್ತರ ಪ್ರದೇಶದಲ್ಲಿ ಸಾಮೂಹಿಕ ಮತಾಂತರಕ್ಕೆ ಅವಕಾಶ ನೀಡುವುದಿಲ್ಲ: ಪೊಲೀಸ್ ಇಲಾಖೆ

ಲಖ್ನೌ : 'ಉತ್ತರ ಪ್ರದೇಶ'ದಲ್ಲಿ ಡಿ.25ರಂದು ನಡೆಯಲಿರುವ ಸಾಮೂಹಿಕ ಮರು ಮತಾಂತರ ಕಾರ್ಯಕ್ರಮ ನಡೆಯಲು ಅವಕಾಶ ನೀಡುವುದಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಧರ್ಮ ಜಾಗರಣ ಮಂಚ್ ಹಾಗೂ ಭಜರಂಗದಳ ಸಂಘಟನೆ ಉತ್ತರ ಪ್ರದೇಶದಲ್ಲಿ ಡಿ.25ರಂದು 5 ಸಾವಿರ ಮುಸ್ಲಿಮ್ ಹಾಗೂ ಕ್ರಿಶ್ಚಿಯನ್ ಸಮುದಾಯದವರನ್ನು ಘರ್ ವಾಪಸಿ ಮೂಲಕ ಹಿಂದೂ ಧರ್ಮಕ್ಕೆ ವಾಪಸ್ ಕರೆತರುವುದಾಗಿ ಘೋಷಿಸಿತ್ತು. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಉತ್ತರ ಪ್ರದೇಶ ಪೊಲೀಸರು ಘರ್ ವಾಪಸಿ ಕಾರ್ಯಕ್ರಮ ನಡೆಯಲು ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.

ಇತ್ತೀಚೆಗಷ್ಟೇ ಉತ್ತರ ಪ್ರದೇಶದಲ್ಲಿ ಸುಮಾರು 57 ಮುಸ್ಲಿಂ ಕುಟುಂಬವನ್ನು ಧರ್ಮ ಜಾಗರಣ ಮಂಚ್ ಹಿಂದೂ ಧರ್ಮಕ್ಕೆ ವಾಪಸ್ ಕರೆತಂದಿತ್ತು. ಈ ಪ್ರಕರಣ ಸಂಸತ್ ಕಲಾಪದಲ್ಲಿ ಕೋಲಾಹಲ ಸೃಷ್ಠಿಸಿತ್ತು. ಮುಸ್ಲಿಮ್ ಹಾಗೂ ಕ್ರಿಶ್ಚಿಯನ್ ಸಮುದಾಯದವರನ್ನು ಹಿಂದೂ ಧರ್ಮಕ್ಕೆ ವಾಪಸ್ ಕರೆತರುವ ಹಿಂದೂ ಸಂಘಟನೆಗಳ ಕ್ರಮಕ್ಕೆ ಕಾಂಗ್ರೆಸ್ ಸೇರಿದಂತೆ ಹಲವು ಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Religion & Spirituality

ಶಬರಿಮಲೈ: ಮಹಿಳೆಯರ ದೇಗುಲ ಪ್ರವೇಶ ಕುರಿತ ಅರ್ಜಿ ಸಾಂವಿಧಾನಿಕ ಪೀಠಕ್ಕೆ
  • ಶಬರಿಮಲೈ: ಮಹಿಳೆಯರ ದೇಗುಲ ಪ್ರವೇಶ ಕುರಿತ ಅರ್ಜಿ ಸಾಂವಿಧಾನಿಕ ಪೀಠಕ್ಕೆ
  • ಶಬರಿಮಲೈ ದೇಗುಲಕ್ಕೆ ಮಹಿಳೆಯ ಪ್ರವೇಶ ಕುರಿತಾದ ಆರ್ಜಿಯನ್ನು ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿದೆ.
  • ವೈಭವದ ದಸರಾ ಮಹೋತ್ಸವ: ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾದ ಚಾಮುಂಡೇಶ್ವರಿ
  • ನಂದಿಧ್ವಜಕ್ಕೆ ಸಿಎಂ ಪೂಜೆ: ಜಂಬೂಸವಾರಿಗೆ ಚಾಲನೆ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited