Untitled Document
Sign Up | Login    
Dynamic website and Portals
  
December 17, 2014

ಮರುಮತಾಂತರದ ಬಗ್ಗೆ ಪ್ರಧಾನಿ ಸ್ಪಷ್ಟನೆ ನೀಡುವವರೆಗೂ ಹೋರಾಟ ನಿಲ್ಲುವುದಿಲ್ಲ: ಕಾಂಗ್ರೆಸ್

ನವದೆಹಲಿ : 'ಉತ್ತರ ಪ್ರದೇಶ'ದ ಆಗ್ರಾದಲ್ಲಿ ನಡೆದ ಮರುಮತಾಂತರದ ವಿಷಯದ ಬಗ್ಗೆ ಸಂಸತ್ ನಲ್ಲಿ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಗದ್ದಲ ಮುಂದುವರೆಸಿವೆ.

ಮರುಮತಾಂತರದ ಬಗ್ಗೆ ಕೋಲಾಹಲ ಸೃಷ್ಠಿಸಿರುವ ಸಂಸತ್ ಸದಸ್ಯರು ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟನೆ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ. ಕೇಂದ್ರ ಸರ್ಕಾರ ಮರುಮತಾಂತರದ ಬಗ್ಗೆ ಅಧಿಕೃತ ಹೇಳಿಕೆ ನೀಡಬೇಕು, ಪ್ರಧಾನಿ ನರೇಂದ್ರ ಮೋದಿ ಅವರು ಮರುಮತಾಂತರದ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕು ಅಲ್ಲಿಯ ವರೆಗೂ ಸುಗಮ ಸಂಸತ್ ಕಲಾಪ ನಡೆಯಲು ಅವಕಾಶ ನೀಡುವುದಿಲ್ಲ ಎಂದು ಜೆಡಿಯು, ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ.

ಉತ್ತರ ಪ್ರದೇಶದ ಆಗ್ರಾದಲ್ಲಿ ಧರ್ಮ ಜಾಗರಣ್ ಮಂಚ್ ಹಾಗೂ ಭಜರಂಗದಳದ ಕಾರ್ಯಕರ್ತರು 57 ಮುಸ್ಲಿಂ ಕುಟುಂಬವನ್ನು ಹಿಂದೂ ಧರ್ಮಕ್ಕೆ ಮರುಮತಾಂತರ ಮಾಡಿಸಿದ್ದರು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮರುಮತಾಂತರಕ್ಕೆ ಅವಕಾಶ ನೀಡಬಾರದು ಎಂದು ಕಾಂಗ್ರೆಸ್ ನ ಸಂಸದರು ಪ್ರತಿಭಟನೆ ನಡೆಸುತ್ತಿದ್ದಾರೆ.

ಕಾಂಗ್ರೆಸ್ ಸದಸ್ಯರು ಕಳೆದ ಒಂದು ವಾರದಿಂದ ಪ್ರತಿಭಟನೆ ನಡೆಸುತ್ತಿದ್ದರೂ ಕೇಂದ್ರ ಸರ್ಕಾರ ಈ ಬಗ್ಗೆ ಅಧಿಕೃತ ಹೇಳಿಕೆ ನೀಡಿಲ್ಲ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited