Untitled Document
Sign Up | Login    
Dynamic website and Portals
  
December 17, 2014

ರಾಜ್ಯದಲ್ಲಿ ಬಸ್ ಪ್ರಯಾಣ ದರ ಇಳಿಕೆ ಸಾಧ್ಯತೆ

ರಾಜ್ಯದಲ್ಲಿ ಬಸ್ ಪ್ರಯಾಣ ದರ ಇಳಿಕೆ ಸಾಧ್ಯತೆ

ಬೆಳಗಾವಿ : ಕೇಂದ್ರ ಸರ್ಕಾರ ನಿರಂತವಾಗಿ ಪೆಟ್ರೋಲ್, ಡಿಸೇಲ್ ದರ ಇಳಿಕೆ ಮಾಡುತ್ತಿದ್ದರೂ ಬಸ್ ದರ ಇಳಿಕೆ ಮಾಡದ ಸರ್ಕಾರ ಜನರ ಆಕ್ರೋಶಕ್ಕೆ ಕೊನೆಗೂ ಎಚ್ಚೆತ್ತುಕೊಂಡಿದೆ.

ಸರ್ಕಾರದ ಮೇಲೆ ನಿರಂತರ ಒತ್ತಡ ಹೇರಿದ್ದರಿಂದ ರಾಜ್ಯ ರಸ್ತೆ ಸಾರಿಗೆ ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ಪ್ರಯಾಣ ದರ 1ರಿಂದ 2ರೂಪಾಯಿಗಳು ಇಳಿಕೆ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಈ ಬಗ್ಗೆ ಇನ್ನು 2 ದಿನಗಳಲ್ಲಿ ಸರ್ಕಾರ ಅಧಿಕೃತ ಆದೇಶ ಹೊರಡಿಸಲಿದೆ.

ಬಸ್ ಪ್ರಯಾಣ ದರ ಇಳಿಕೆ ಮಾಡಲು ತೀರ್ಮಾನಿಸಿದ್ದೇವೆ. ಎಷ್ಟು ರೂಪಾಯಿ ಇಳಿಕೆ ಮಾಡಬೇಕು ಎಂಬ ಬಗ್ಗೆ ವರದಿ ನೀಡುವಂತೆ ಕಾರ್ಯದರ್ಶಿಯವರಿಗೆ ಸೂಚನೆ ನೀಡಿದ್ದು ವರದಿ ಬಂದ ನಂತರ ಅಧಿಕೃವಾಗಿ ಪ್ರಕಟಿಸಲಾಗುವುದು ಎಂದು ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಎನ್.ಡಿ.ಎ ಸರ್ಕಾರ ಅಸ್ಥಿತ್ವಕ್ಕೆ ಬಂದ ನಂತರ ನಿರಂತರವಾಗಿ ಪೆಟ್ರೋಲ್, ಡಿಸೇಲ್ ದರ ಇಳಿಕೆಯಾಗುತ್ತಿದ್ದರೂ ರಾಜ್ಯದಲ್ಲಿ ಬಸ್ ಪ್ರಯಾಣ ದರ ಇಳಿಕೆಯಾಗದೇ ಇರುವುದಕ್ಕೆ ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದವು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Infrastructure

ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿಗೆ ಎನ್ ಜಿಟಿ ಅನುಮತಿ
  • ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿಗೆ ಎನ್ ಜಿಟಿ ಅನುಮತಿ
  • ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿಗೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್ ಜಿಟಿ) ಷರತ್ತುಬದ್ಧ ಅನುಮತಿಯನ್ನು ನೀಡಿದೆ.
  • ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಮತ್ತೆ ಇಳಿಕೆ
  • ಪೆಟ್ರೋಲ್, ಡೀಸೆಲ್ ದರ ಮತ್ತೆ ಇಳಿಕೆ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited