Untitled Document
Sign Up | Login    
Dynamic website and Portals
  
December 20, 2014

ವಿಧಾನಸಭಾ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ: ಕೋಲಾಹಲದ ನಡುವೆಯೇ ಕಲಾಪ ಅಂತ್ಯ

ಬೆಳಗಾವಿ : ಕಳೆದ 10 ದಿನಗಳಿಂದ ನಡೆಯುತ್ತಿದ್ದ ವಿಧಾನ ಮಂಡಲ ಅಧಿವೇಶನ ಡಿ.20ರಂದು ಮುಕ್ತಾಯಗೊಂಡಿದೆ. ವಿಧಾನಸಭಾ ಕಲಾಪವನ್ನು ಸ್ಪೀಕರ್ ಕಾಗೋಡು ತಿಮ್ಮಪ್ಪ ಶನಿವಾರ ಅನಿರ್ದಿಷ್ಟಾವಧಿಗೆ ಮುಂದೂಡಿದ್ದಾರೆ.

ವಿಧಾನಸಭಾ ಕಲಾಪದ ಕೊನೆಯ ದಿನವೂ ಬಿಜೆಪಿ ಸದಸ್ಯರು ಧರಣಿ ನಡೆಸಿದರು. ವಿಧಾಸಭೆ ಕಲಾಪ ಆರಂಭವಾಗುತ್ತಿದ್ದಂತೆ ಕಳಂಕಿತ ಸಚಿವರ ಬಗ್ಗೆ ಚರ್ಚಿಸಲು ಅವಕಾಶ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಪ್ರತಿಪಕ್ಷಗಳ ಪ್ರತಿಭಟನೆ ಹಾಗೂ ಗದ್ದಲದಿಂದಾಗಿ ಸ್ಪೀಕರ್ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದರು.

ಇನ್ನು ವಿಧಾನಪರಿಷತ್ ನಲ್ಲೂ ಬಿಜೆಪಿ ಕಳಂಕಿತ ಸಚಿವರ ಕುರಿತು ಚರ್ಚಿಸಲು ಅವಕಾಶ ನೀಡಬೇಕು ಎಂದು ಪಟ್ಟು ಹಿಡಿದಿದ್ದರು. ಇದೇ ವೇಳೆ ಪ್ರತಿಪಕ್ಷಗಳ ಗದ್ದಲದ ನಡುವೆಯೂ ಕರ್ನಾಟಕ ಮರಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ 2014, ಗೋಹತ್ಯೆ ನಿಷೇಧ ಕಾಯ್ದೆ ಹಿಂಪೆಡಯುವ ವಿಧೇಯಕ ಹಾಗೂ ಕರ್ನಾಟಕ ಸ್ಟ್ಯಾಂಪ್ ಎರಡನೇ ತಿದ್ದುಪಡಿ ವಿಧೇಯಕವನ್ನು ಅಂಗೀಕರಿಸಲಾಯಿತು. ಈ ಬಾರಿಯ ಅಧಿವೇಶನ ಬಹುತೇಕ ಪ್ರತಿಭಟನೆಗೆ ಸಾಕ್ಷಿಯಾಗಿದ್ದನ್ನು ಹೊರತುಪಡಿಸಿದರೆ ಯಾವುದೇ ಮಹತ್ವದ ವಿಷಯಗಳ ಬಗ್ಗೆ ಚರ್ಚೆ ನಡೆದಿಲ್ಲ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited