ನವದೆಹಲಿ : ಬಲವಂತವಾಗಿ ಮತಾಂತರ ಮಾಡಿದರೆ ಸರ್ಕಾರ ಕಠಿಣ ಕ್ರಮ ಜರುಗಿಸಲಿದೆ ಎಂದು ಸಚಿವ ವೆಂಕಯ್ಯ ನಾಯ್ಡು ಎಚ್ಚರಿಸಿದ್ದಾರೆ.
ಬಲವಂತದ ಮತಾಂತರವನ್ನು ಸರ್ಕಾರ ಸಹಿಸುವುದಿಲ್ಲ. ಮತಾಂತರ ಮಾಡುವವರ ವಿರುದ್ಧ ಕ್ರಮಕೈಗೊಳ್ಳಲೇ ಬೇಕಾಗುತ್ತದೆ. ಒಂದು ವೇಳೆ ರಾಜ್ಯ ಸರ್ಕಾರಕ್ಕೆ ಸರಿಯಾದ ಕ್ರಮ ಕೈಗೊಳ್ಳಲು ಸಾಧ್ಯವಾಗದೇ ಇದ್ದರೆ, ಕೇಂದ್ರ ಕಾನೂನು ಇದೆ.
ಈ ನಿಯಮ ದೇಶಕ್ಕೇ ಅನ್ವಯಿಸುತ್ತದೆ. ಆದರೆ ಇದಕ್ಕೆ ವಿಪಕ್ಷಗಳು ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ವೆಂಕಯ್ಯ ನಾಯ್ಡು ಅಸಮಾಧಾನ ವ್ಯಕ್ತಪಡಿಸಿದ್ದಾರೆ.