Untitled Document
Sign Up | Login    
Dynamic website and Portals
  
December 22, 2014

ಭಾರತ ಹಿಂದೂ ರಾಷ್ಟ್ರವೆಂಬ ಭಾಗವತ್ ಹೇಳಿಕೆಗೆ ಸಂಸತ್ ನಲ್ಲಿ ಪ್ರತಿಭಟನೆ

ಆರ್.ಎಸ್.ಎಸ್ ಮೋಹನ್ ಭಾಗವತ್ ಆರ್.ಎಸ್.ಎಸ್ ಮೋಹನ್ ಭಾಗವತ್

ನವದೆಹಲಿ : ಡಿ.22ರ ಸಂಸತ್ ಕಲಾಪದಲ್ಲಿ ವಿರೋಧ ಪಕ್ಷಗಳು ಕೋಲಾಹಲವೆಬ್ಬಿಸಿದ ಹಿನ್ನೆಲೆಯಲ್ಲಿ ರಾಜ್ಯಸಭೆಯ ಕಲಾಪವನ್ನು ಮಧ್ಯಾಹ್ನದ ವರೆಗೆ ಮುಂದೂಡಲಾಗಿದೆ.

ಆರ್.ಎಸ್.ಎಸ್ ಮುಖಂಡ ಮೋಹನ್ ಭಾಗವತ್, ಮರುಮತಾಂತರವನ್ನು ಸಮರ್ಥಿಸಿ ನೀಡಿದ್ದ ಹೇಳಿಕೆಯನ್ನು ಖಂಡಿಸಿರುವ ವಿರೋಧಪಕ್ಷಗಳ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಂಗ್ರೆಸ್, ತೃಣ ಮೂಲ ಕಾಂಗ್ರೆಸ್, ಸಮಾಜವಾದಿ ಪಕ್ಷ, ಬಹುಜನ ಸಮಾಜವಾದಿ ಪಕ್ಷದ ಸದಸ್ಯರು ಮೋಹನ್ ಭಾಗವತ್ ಹೇಳಿಕೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಘರ್ ವಾಪಸಿ ಆಂಧೋಲನದ ಮೂಲಕ ದಾರಿ ತಪ್ಪಿರುವವರನ್ನು ಸರಿ ದಾರಿಗೆ ತರುವ ಕೆಲಸ ನಡೆಯುತ್ತಿದೆ. ಭಾರತದಲ್ಲಿರುವವರೆಲ್ಲರೂ ಹಿಂದೂಗಳು, ಭಾರತ ಹಿಂದೂ ಭೂಮಿ, ಇಲ್ಲಿರುವ ಹಿಂದೂಗಳು ಎಲ್ಲಿಂದಲೋ ಬಂದವರಲ್ಲ ಎಂದು ಮೋಹನ್ ಭಾಗವತ್ ಹೇಳಿದ್ದರು. ಈ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ.

ವಿಪಕ್ಷಗಳ ಪ್ರತಿಭಟನೆಯಿಂದಾಗಿ ಸುಗಮ ಕಲಾಪಕ್ಕೆ ಅಡ್ಡಿಯುಂಟಾಗಿದ್ದು ಮಧ್ಯಾಹ್ನದವರೆಗೆ ಕಲಾಪವನ್ನು ಮುಂದೂಡಲಾಗಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited