ನವದೆಹಲಿ : 'ಜಮ್ಮು-ಕಾಶ್ಮೀರ' ವಿಧಾನಸಭಾ ಚುನಾವಣೆ ಫಲಿತಾಂಶ ಅತಂತ್ರವಾಗಿರುವ ಹಿನ್ನೆಲೆಯಲ್ಲಿ ಮೈತ್ರಿ ಬಗ್ಗೆ ಮುಕ್ತವಾಗಿರಲು ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ನಾಯಕರಿಗೆ ಕರೆ ನೀಡಿದ್ದಾರೆ.
ಜಮ್ಮು-ಕಾಶ್ಮೀರದ 87 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆ ಫಲಿತಾಂಶ ಅತಂತ್ರವಾಗಿದ್ದು ಯಾವುದೇ ಪಕ್ಷಕ್ಕೂ ಬಹುಮತ ದೊರೆಯದ ಹಿನ್ನೆಲೆಯಲ್ಲಿ ಮೈತ್ರಿ ಸರ್ಕಾರ ರಚನೆ ಅನಿವಾರ್ಯವಾಗಿದ್ದು ಮೈತ್ರಿ ಬಗ್ಗೆ ಮುಕ್ತವಾಗಿರಲು ಸೂಚನೆ ನೀಡಿದ್ದಾರೆ.
ಇದೇ ವೇಳೆ ಪಿಡಿಪಿ ಸಹ ಬಿಜೆಪಿಯೊಂದಿಗೆ ಮೈತ್ರಿ ಸರ್ಕಾರ ರಚನೆ ಮಾಡಲು ಸಿದ್ಧವಿದ್ದು ಕಾಂಗ್ರೆಸ್ ಹಾಗೂ ಎನ್.ಸಿ ವಿರುದ್ಧ ವಾಗ್ದಾಳಿ ನಡೆಸಿದೆ.
ಎನ್.ಸಿ ಹಾಗೂ ಕಾಂಗ್ರೆಸ್ ನೇತೃತ್ವದ ಸರ್ಕಾರ ರಾಜ್ಯವನ್ನು ಲೂಟಿ ಹೊಡೆದಿದ್ದು, ಜನರು ಈ ಎರಡೂ ಪಕ್ಷಗಳನ್ನು ತಿರಸ್ಕರಿಸಿದ್ದಾರೆ ಆದ್ದರಿಂದ ಬಿಜೆಪಿಯೊಂದಿಗೆ ಸರ್ಕಾರ ರಚಿಸುವುದಾಗಿ ಪಿಡಿಪಿ ವಕ್ತಾರ ನಹೀಮ್ ಅಖ್ತರ್ ಹೇಳಿದ್ದಾರೆ.
ಕೇಂದ್ರದಲ್ಲಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಭಿವೃದ್ಧಿಗೆ ಪೂರಕವಾಗಿ ಕಾರ್ಯನಿರ್ವಹಿಸುತ್ತಿದೆ. ಬಿಜೆಪಿಯೊಂದಿಗೆ ಮೈತ್ರಿ ಸರ್ಕಾರ ರಚನೆ ಮಾಡಿದರೆ ಜಮ್ಮು-ಕಾಶ್ಮೀರದ ಅಭಿವೃದ್ಧಿ ಸಾಧ್ಯವಾಗಲಿದೆ ಎಂದು ಅಖ್ತರ್ ತಿಳಿಸಿದ್ದಾರೆ.