Untitled Document
Sign Up | Login    
Dynamic website and Portals
  
December 24, 2014

ಅಟಲ್ ಬಿಹಾರಿ ವಾಜಪೇಯಿ, ಮದನ್ ಮೋಹನ್ ಮಾಳವೀಯಾಗೆ ಭಾರತ ರತ್ನ

ಅಟಲ್ ಬಿಹಾರಿ ವಾಜಪೇಯಿ ಹಾಗೂ ಮದನ್ ಮೋಹನ್ ಮಾಳವೀಯಾ ಅಟಲ್ ಬಿಹಾರಿ ವಾಜಪೇಯಿ ಹಾಗೂ ಮದನ್ ಮೋಹನ್ ಮಾಳವೀಯಾ

ನವದೆಹಲಿ : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹಾಗೂ ಬನಾರಸ್ ವಿಶ್ವವಿದ್ಯಾನಿಲಯ ಸ್ಥಾಪಕ ದಿ.ಮದನ್ ಮೋಹನ್ ಮಾಳವೀಯಾ ಅವರಿಗೆ ಕೇಂದ್ರ ಸರ್ಕಾರ ಭಾರತ ರತ್ನ ಪ್ರಶಸ್ತಿ ಘೋಷಿಸಿದೆ.

ಅಟಲ್ ಬಿಹಾರಿ ವಾಜಪೇಯಿ ಹಾಗೂ ಮಾಳಾವೀಯಾ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿರುವುದರ ಬಗ್ಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಧಿಕೃತವಾಗಿ ಘೋಷಿಸಿದ್ದಾರೆ.

ಕೇಂದ್ರ ಸರ್ಕಾರ, ಡಿ.25ರಂದು ಮಾಜಿ ಪ್ರಧಾನಿ ವಾಜಪೇಯಿ ಅವರ ಜನ್ಮದಿನವನ್ನು ಉತ್ತಮ ಆಡಳಿತದ ದಿನವನ್ನಾಗಿ ಘೋಷಿಸಿತ್ತು. ಈ ಬೆನ್ನಲ್ಲೇ ವಾಜಪೇಯಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ನಾಳೆ ಅಟಲ್ ಬಿಹಾರಿ ವಾಜಪೇಯಿ ಅವರ 90ನೇ ಜನ್ಮದಿನವಾಗಿದೆ.

ಜ.26ರಂದು ನಡೆಯಲಿರುವ ಗಣರಾಜ್ಯೋತ್ಸವ ದಿನಾಚರಣೆಯಂದು ಉಭಯ ನಾಯಕರಿಗೂ ಭಾರತದ ಅತ್ಯುನ್ನತ ನಾಗರಿಕ ಗೌರವ ನೀಡಲಾಗುತ್ತದೆ.

ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ, ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿತ್ತು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited