Untitled Document
Sign Up | Login    
Dynamic website and Portals
  
December 25, 2014

ಜ.1ರಿಂದ ಬಸ್ ಪ್ರಯಾಣ ದರ ಇಳಿಕೆ: ರಾಮಲಿಂಗಾ ರೆಡ್ಡಿ

ಬೆಂಗಳೂರು : ರಾಜ್ಯದಲ್ಲಿ ಬಸ್ ಪ್ರಯಾಣ ದರ ಇಳಿಕೆ ಮಾಡುವ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಪ್ರತಿಕ್ರಿಯಿಸಿದ್ದು ಜನವರಿ 1 ರಿಂದ ಬಿಎಂಟಿಸಿ ಹಾಗೂ ಕೆ.ಎಸ್‌.ಆರ್.ಟಿ.ಸಿ ಪ್ರಯಾಣ ದರ ಇಳಿಕೆಯಾಗಲಿದೆ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಮಲಿಂಗ ರೆಡ್ಡಿ, ಡಿಸೇಲ್ ದರ ಕಡಿಮೆಯಾದ ಬೆನ್ನಲ್ಲೇ ಬಿಎಂಟಿಸಿ ಹಾಗೂ ಕೆ.ಎಸ್‌.ಆರ್.ಟಿ.ಸಿ ಪ್ರಯಾಣ ದರವನ್ನು ಕಡಿತಗೊಳಿಸಬೇಕು ಎಂಬ ಬೇಡಿಕೆ ಹೆಚ್ಚಾಗಿತ್ತು. ಹೀಗಾಗಿ ಜನವರಿ 1 ರಿಂದ ನೂತನ ದರ ಜಾರಿಗೆ ಬರಲಿದ್ದು, ಬಸ್ ಪ್ರಯಾಣ ದರ ಇಳಿಕೆ ಮಾಡುವುದಕ್ಕೆ ಸಿಎಂ ಸಿದ್ದರಾಮಯ್ಯ ಅವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ಹೇಳಿದ್ದಾರೆ.

ಮೂಲಗಳ ಪ್ರಕಾರ, ಶೇ. 3ರಿಂದ 4 ರಷ್ಟು ಇಳಿಕೆ ಆಗಲಿದೆ. ಪ್ರತಿ ಸ್ಟೇಜ್‌ ಗೆ 1 ರೂ. ಇಳಿಕೆ ಆಗಲಿದೆ ಎಂದು ತಿಳಿದುಬಂದಿದೆ. ಇನ್ನು ಬಿಎಂಟಿಸಿ ದಿನದ ಬಸ್ ಪಾಸ್ ದರದಲ್ಲೂ 5 ರೂ. ಇಳಿಕೆಯಾಗುವ ನಿರೀಕ್ಷೆ ಇದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Infrastructure

ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿಗೆ ಎನ್ ಜಿಟಿ ಅನುಮತಿ
 • ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿಗೆ ಎನ್ ಜಿಟಿ ಅನುಮತಿ
 • ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿಗೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್ ಜಿಟಿ) ಷರತ್ತುಬದ್ಧ ಅನುಮತಿಯನ್ನು ನೀಡಿದೆ.
 • ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಮತ್ತೆ ಇಳಿಕೆ
 • ಪೆಟ್ರೋಲ್, ಡೀಸೆಲ್ ದರ ಮತ್ತೆ ಇಳಿಕೆ
 • The Ultimate Job Portal
  Netzume - Resume Website Gou Products

  Other News

  Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
  © bangalorewaves. All rights reserved. Developed And Managed by Rishi Systems P. Limited