Untitled Document
Sign Up | Login    
Dynamic website and Portals
  
December 26, 2014

ಜ.3ರಂದು ಬೆಂಗಳೂರಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ

ಬಿಜೆಪಿ ರಾಷ್ಠ್ರಾಧ್ಯಕ್ಷ ಅಮಿತ್ ಶಾ ಬಿಜೆಪಿ ರಾಷ್ಠ್ರಾಧ್ಯಕ್ಷ ಅಮಿತ್ ಶಾ

ಬೆಂಗಳೂರು : ವಿಶಿಷ್ಠ ಚುನಾವಣಾ ತಂತ್ರಗಾರಿಕೆಯಿಂದ ಉತ್ತರ ಭಾರತದ ಚುನಾವಣೆಗಳಲ್ಲಿ ಯಶಸ್ಸುಗಳಿಸಿ ಬಿಜೆಪಿಯನ್ನು ಅಧಿಕಾರಕ್ಕೆ ತಂದಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಈಗ ದಕ್ಷಿಣ ಭಾರತದತ್ತ ಕಣ್ಣಿಟ್ಟಿದ್ದಾರೆ.

ಕರ್ನಾಟಕದ ಮೂಲಕ, ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ಯೋಜನೆ ರೂಪಿಸಿರುವ ಅಮಿತ್ ಶಾ, ಜ. 3ರಂದು ಬೆಂಗಳೂರಿಗೆ ಆಗಮಿಸಲಿದ್ದು ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯದ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ.

ಅಮಿತ್ ಶಾ ಭೇಟಿ ಬಗ್ಗೆ ಪ್ರತಿಕ್ರಿಯಿಸಿರುವ, ಮಾಜಿ ಸಿ.ಎಂ ಯಡಿಯೂರಪ್ಪ, ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ಬಗ್ಗೆ ರಾಜ್ಯದ ಎಲ್ಲ ನಾಯಕರು ಒಟ್ಟಾಗಿ ಅವರೊಂದಿಗೆ ಚರ್ಚಿಸುತ್ತೇವೆ ಎಂದು ಹೇಳಿದ್ದಾರೆ.

ಅಮಿತ್ ಶಾ, ಅವರು ತಮಿಳುನಾಡಿನಲ್ಲೂ ಬಿಜೆಪಿಯನ್ನು ಅಧಿಕಾರಕ್ಕೆ ತರಲು ತಂತ್ರ ರೂಪಿಸಿದ್ದು, ಕರ್ನಾಟಕ, ತಮಿಳುನಾಡು, ಕೇರಳ ರಾಜ್ಯಗಳು ಅಮಿತ್ ಶಾ ತಂತ್ರಗಾರಿಕೆಯ ಪಟ್ಟಿಯಲ್ಲಿರುವ ರಾಜ್ಯಗಳಾಗಿವೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited