Untitled Document
Sign Up | Login    
Dynamic website and Portals
  
December 26, 2014

ರಾಜಸ್ತಾನದ 16 ಸಚಿವರಿಗೆ ಇಂಡಿಯನ್ ಮುಜಾಹಿದ್ದೀನ್ ಉಗ್ರರಿಂದ ಬೆದರಿಕೆ

ಜೈಪುರ : 'ರಾಜಸ್ತಾನ'ದ 16 ಸಚಿವರಿಗೆ ಇಂಡಿಯನ್ ಮುಜಾಹಿದ್ದೀನ್ ಉಗ್ರರು ಇ-ಮೇಲ್ ಮೂಲಕ ಬೆದರಿಕೆ ಹಾಕಿದ್ದಾರೆ. 2015 ಜನವರಿ 26, ಗಣರಾಜ್ಯೋತ್ಸವ ದಿನದಂದು ರಾಜ್ಯದಲ್ಲಿ ವಿಧ್ವಂಸಕ ಕೃತ್ಯ ನಡೆಸಲಾಗುವುದು ಎಂದು ಬೆದರಿಕೆ ಹಾಕಲಾಗಿದೆ.

ಬೆದರಿಕೆ ಸಂದೇಶದಿಂದಾಗಿ ರಾಜಸ್ಥಾನದಲ್ಲಿ ಆತಂಕ ಸೃಷ್ಟಿಯಾಗಿದ್ದು, ಸಚಿವರಿಗೆ ಬೆದರಿಕೆ ಹಾಕಿರುವ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಈ ಬಗ್ಗೆ ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ.

ಲಿಯೋನಾಜಾರ್ದ ಎಂಬ ಇಮೇಲ್ ಐಡಿಯಿಂದ ಈ ಬೆದರಿಕೆ ಸಂದೇಶ ಬಂದಿದ್ದು "ನಾವು ಜನವರಿ 26ರಂದು ರಾಜಸ್ತಾನದಲ್ಲಿ ಹಲವಾರು ಸ್ಫೋಟಗಳನ್ನು ಮಾಡಲು ಯೋಜನೆ ರೂಪಿಸಿದ್ದೇವೆ" ಎಂದು ಹೇಳಿದ್ದಾರೆ.

10 ಕ್ಯಾಬಿನೆಟ್ ಸಚಿವರು ಮತ್ತು 6 ಸಚಿವರ ಇಮೇಲ್ ಐಡಿಗಳಿಗೆ ಈ ಬೆದರಿಕೆ ಸಂದೇಶ ಬಂದಿದೆ. ಬೆದರಿಕೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಿಗಿ ಭದ್ರತೆ ಕಲ್ಪಿಸಿದ್ದು, ಜನರು ಭಯಪಡುವ ಅಗತ್ಯವಿಲ್ಲ ಎಂದು ರಾಜಸ್ತಾನಗೃಹ ಸಚಿವ ಗುಲಾಬ್ ಚಂದ್ ಕತಾರಿಯಾ ಹೇಳಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Crime

ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಬೆಂಗಳೂರಿನ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
  • ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿದ ಎಸ್ ಐ ಟಿ
  • ಸೈನೈಡ್ ಮೋಹನ್ ಗೆ ಜೀವಾವಧಿ ಜೈಲು ಶಿಕ್ಷೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited