Untitled Document
Sign Up | Login    
Dynamic website and Portals
  
December 29, 2014

ಜನನಿಬಿಡ ಪ್ರದೇಶಗಳಲ್ಲಿ ಸಿಸಿ ಕ್ಯಾಮರಾ ಕಡ್ಡಾಯ: ಸಿಎಂ

ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಬೆಂಗಳೂರಿನಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆ ಅಂತ್ಯಗೊಂಡಿದೆ.

ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಜನಸಂದಣಿ ಪ್ರದೇಶಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಲು ಸೂಚಿಸಲಾಗಿದೆ. ಬೆಂಗಳೂರಿನಲ್ಲಿ ಭದ್ರತೆ ಇನಷ್ಟು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ವಿಧಾನಸೌಧದ 5 ಕಿ.ಮೀ ವ್ಯಾಪ್ತಿಯಲ್ಲಿ ಸಿಸಿ ಟಿವಿ ಅಳವದಿಸಲಾಗುವುದು. ಮಾರ್ಕೆಟ್, ಹೋಟೆಲ್, ಮಾಲ್, ಜನನಿಬಿಡ ಪ್ರದೇಶಗಳಲ್ಲಿ ಸಿಸಿ ಕ್ಯಾಮರಾ ಕಡ್ಡಾಯ. ಘಟನೆಯ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದು, ಸಾರ್ವಜನಿಕರೇ ಮಾಹಿತಿ ನೀಡಬೇಕು. ಮಾಹಿತಿ ನೀಡುವವರ ಹೆಸರನ್ನು ಗೌಪ್ಯವಾಗಿಡಲಾಗುವುದು. ಸಾರ್ವಜನಿಕರ ಸುರಕ್ಷತೆಗೆ ಸರ್ಕಾರದಿಂದ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಎಂ.ಜಿ.ರಸ್ತೆ ಬಳಿಯ ಚರ್ಚ್ ಸ್ಟ್ರೀಟ್ ನಲ್ಲಿ ರಾತ್ರಿ 8:30ಕ್ಕೆ ಬಾಂಬ್ ಸ್ಫೋಟ ಗೊಂಡಿದ್ದು, ಘಟನೆಯಲ್ಲಿ ನಾಲ್ವರು ಗಾಯಗೊಂಡಿದರು. ಆ ಪೈಕಿ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಮೂವರು ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ. ಮೃತರ ಕುಟುಬಕ್ಕೆ ರಾಜ್ಯ ಸರ್ಕಾರದಿಂದ 5 ಲಕ್ಷ ರೂ.ಪರಿಹಾರ ಘೋಷಿಸಲಾಗಿದೆ ಎಂದು ತಿಳಿಸಿದರು.

2013ರಲ್ಲಿ ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಕಛೇರಿ ಎದುರು ಬಾಂಬ್ ಸ್ಫೋಟ ನಡೆದಿತ್ತು. 2008, 2010ರಲ್ಲಿಯೂ ಬೆಂಗಳೂರಿನಲ್ಲಿ ಬಾಂಬ್ ಸ್ಫೋಟ ನಡೆದಿದೆ. ಮಧ್ಯಪ್ರದೇಶ ಜೈಲಿನಿಂದ ತಪ್ಪಿಸಿಕೊಂಡಿರುವ ಸಿಮಿ ಉಗ್ರರ ಬಗ್ಗೆಯೂ ತನಿಖೆ ಪ್ರಗತಿಯಲ್ಲಿದೆ ಎಂದ ಅವರು, ಕರ್ನಾಟಕ ಪೊಲೀಸರೇ ಸ್ಫೋಟದ ತನಿಖೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.

ಘಟನೆಯ ಹಿಂದೆ ಯಾವ ಸಂಘಟನೆ ಕೈವಾಡವಿದೆ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಗುಪ್ತಚರ ಇಲಾಖೆ ಉನ್ನತೀಕರಣಕ್ಕೆ ಕ್ರಮ ಕೈಗೊಳ್ಳಲಾಗುವುದು. ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳ ಜತೆ ನಿರಂತರ ಸಂಪರ್ಕದಲ್ಲಿದ್ದೇವೆ ಎಂದರು. ಘಟನೆಯನ್ನು ಬಿಜೆಪಿ ರಾಜಕಾರಣಕ್ಕೆ ಬಳಸಿಕೊಳ್ಳಬಾರದು ಎಂದು ಇದೇ ವೇಳೆ ಸಿಎಂ ಮನವಿ ಮಾಡಿದ್ದಾರೆ.

ಇನ್ನು ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ಅವಧಿಯನ್ನು ಮಧ್ಯ ರಾತ್ರಿ 2 ಗಂಟೆವರೆಗೆ ವಿಸ್ತರಿಸಲಾಗಿತ್ತು. ಬದ್ರತಾ ದೃಷ್ಠಿಯಿಂದ ಈ ಬಗ್ಗೆ ಮರು ಪರಿಶೀಲನೆ ನಡೆಸಲಾಗಿದ್ದು, ಅವಧಿಯನ್ನು ಒಂದು ಗಂಟೆಯವರೆಗೆ ಮೊಟಕುಗೊಳಿಸಲಾಗಿದೆ. ಅಲ್ಲದೇ ಸಾರ್ವಜನಿಕ ಸುರಕ್ಷತಾ ಕಾಯ್ದೆ ಜಾರಿಗೆ ತರಲಾಗುವುದು ಎಂದು ತಿಳಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited