Untitled Document
Sign Up | Login    
Dynamic website and Portals
  
December 29, 2014

2015-16ನೇ ಸಾಲಿನಲ್ಲಿ ಜಿಡಿಪಿ ಏರಿಕೆಯಾಗುವ ನಿರೀಕ್ಷೆ ಇದೆ: ಅರುಣ್ ಜೇಟ್ಲಿ

ಹಣಕಾಸು ಸಚಿವ ಅರುಣ್ ಜೇಟ್ಲಿ ಹಣಕಾಸು ಸಚಿವ ಅರುಣ್ ಜೇಟ್ಲಿ

ನವದೆಹಲಿ : ಪ್ರಸಕ್ತ ಆರ್ಥಿಕ ಸಾಲಿನಲ್ಲಿ ದೇಶದ ಆರ್ಥಿಕ ಬೆಳವಣಿಗೆ ಚೇತರಿಕೆಯಾಗಲಿರುವ ನಿರೀಕ್ಷೆ ಇದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನವದೆಹಲಿಯಲ್ಲಿ ಮಾತನಾಡಿದ ಅರುಣ್ ಜೇಟ್ಲಿ, ಕಳೆದ 2 ವರ್ಷಗಳಲ್ಲಿ ಆರ್ಥಿಕ ಕುಸಿತ ಉಂಟಾಗಿದ್ದರ ಪರಿಣಾಮ ಆರ್ಥಿಕ ಬೆಳವಣಿಗೆ ಕುಂಟಿತವಾಗಿತ್ತು. ಆದರೆ ಪ್ರಸಕ್ತ ಸಾಲಿನಲ್ಲಿ ಆರ್ಥಿಕತೆ ಚೇತರಿಕೆಯಾಗಲಿದ್ದು, 2015-16ನೇ ಸಾಲಿನಲ್ಲಿ ಉತ್ತಮಗೊಳ್ಳಲಿದೆ ಎಂದು ಹೇಳಿದ್ದಾರೆ.

2008ರಲ್ಲಿ ಜಾಗತಿಕ ಆರ್ಥಿಕ ಬಿಕ್ಕಟ್ಟು ಉಂಟಾಗುವವರೆಗೂ ಭಾರತದ ಆರ್ಥಿಕತೆ ಶೇ.9ರಷ್ಟು ದಾಟುವ ನಿರೀಕ್ಷೆ ಇತ್ತು. ಆದರೆ ಜಾಗತಿಕ ಮಟ್ಟದಲ್ಲಿ ಆರ್ಥಿಕ ಕುಸಿತ ಉಂಟಾಗಿದ್ದರ ಪರಿಣಾಮ 2012-13, 2013-14ರಲ್ಲಿ ಜಿಡಿಪಿ ದರ ಶೇ.5ಕ್ಕೆ ಕುಸಿದಿತ್ತು ಎಂದು ಅರುಣ್ ಜೇಟ್ಲಿ ತಿಳಿಸಿದ್ದಾರೆ.

ಶೇ.4.9ರಷ್ಟಿದ್ದ ಆರ್ಥಿಕ ಬೆಳವಣಿಗೆ ಪ್ರಸಕ್ತ ಸಾಲಿನ ಪ್ರಥಮಾರ್ಧದಲ್ಲಿ ಶೇ.5.5ರಷ್ಟು ಏರಿಕೆ ಕಂಡಿತ್ತು. ಕೇಂದ್ರ ಸರ್ಕಾರ, 2014-15ನೇ ಸಾಲಿನಲ್ಲಿ ಜಿಡಿಪಿ ದರ ಶೇ.4.7ರಿಂದ ಶೇ.5.5ಕ್ಕೆ ಏರಿಕೆಯಾಗುವ ನಿರೀಕ್ಷೆ ಹೊಂದಿದೆ.

ಇದೇ ವೇಳೆ ಮಾತನಾಡಿದ ವಾಣಿಜ್ಯ ಸಚಿವೆ ನಿರ್ಮಲಾ ಸೀತಾರಾಮನ್, ಐಎಂಎಫ್ ನಿರೀಕ್ಷೆಯಂತೆ ಆರ್ಥಿಕ ಬೆಳವಣಿಗೆ ದಾಖಲಿಸುವ ಕೆಲವೇ ದೇಶಗಳಲ್ಲಿ ಭಾರತ ಕೂಡ ಒಂದಾಗಿದೆ. 2014-15ನೇ ಸಾಲಿನಲ್ಲಿ ಭಾರತದ ಜಿಡಿಪಿ ಶೇ.5.6ರಷ್ಟಾಗುವ ಐಎಂಎಫ್ ನಿರೀಕ್ಷೆ ಹೊಂದಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Business & Economics

ಎಸ್‌.ಎಂ.ಕೃಷ್ಣ ಅಳಿಯ ಸಿದ್ಧಾರ್ಥ ಮಾಲಿಕತ್ವದ ಕೆಫೆ ಕಾಫಿ ಡೇ ಮೇಲೆ ಐಟಿ ದಾಳಿ
  • ಎಸ್‌.ಎಂ.ಕೃಷ್ಣ ಅಳಿಯ ಸಿದ್ಧಾರ್ಥ ಮಾಲಿಕತ್ವದ ಕೆಫೆ ಕಾಫಿ ಡೇ ಮೇಲೆ ಐಟಿ ದಾಳಿ
  • ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅಳಿಯ ಸಿದ್ಧಾರ್ಥ ಮಾಲಿಕತ್ವದ ಕೆಫೆ ಕಾಫಿ ಡೇ ಮೇಲೆ ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
  • ಆರ್ ಬಿಐ ನೂತನ ಅಧ್ಯಕ್ಷರಿಂದ ಮೊದಲ ಹಣಕಾಸು ನೀತಿ ಪ್ರಕಟ
  • ಸಾಮಾನ್ಯ ಬಜೆಟ್ ನೊಂದಿಗೆ ರೈಲ್ವೆ ಬಜೆಟ್ ವಿಲೀನ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited