ಶ್ರೀನಗರ : ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚಿಸುವ ಸಂಬಂಧ ತನ್ನ ಬದ್ಧ ವೈರಿ ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ಜತೆ ಪಿಡಿಪಿ 'ಮಹಾ ಮೈತ್ರಿ' ಮಾಡಿಕೊಳ್ಳುವ ಸಾಧ್ಯತೆ ಇದೆ.
87 ಸ್ಥಾನಗಳ ವಿಧಾನಸಭೆಯಲ್ಲಿ 28 ಸ್ಥಾನಗಳನ್ನು ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಪಿಡಿಪಿ, ಎರಡನೇ ಅತಿ ದೊಡ್ಡ ಪಕ್ಷ ಬಿಜೆಪಿ ಜತೆ ಸೇರಿ ಸರ್ಕಾರ ರಚಿಸುವ ಕುರಿತು ಮಾತುಕತೆ ನಡೆಸಿತ್ತು. ಆದರೆ, ಬಿಜೆಪಿ ತನ್ನ ಷರತ್ತುಗಳಿಗೆ ಇನ್ನೂ ಪ್ರತಿಕ್ರಿಯಿಸದ ಹಿನ್ನೆಲೆಯಲ್ಲಿ ಎನ್ಸಿ ಮತ್ತು ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಳ್ಳುವ ಸುಳಿವು ನೀಡಿದೆ.
ಸ್ಥಿರ ಸರ್ಕಾರ ರಚನೆಗೆ ಎನ್ಸಿ ಮತ್ತು ಕಾಂಗ್ರೆಸ್ ಜತೆ ಮೈತ್ರಿ ಕೂಡ ಒಂದು ಆಯ್ಕೆ ಎಂದು ಪಿಡಿಪಿ ವಕ್ತಾರ ನಯೀಮ್ ಅಖ್ತರ್ ಹೇಳಿಕೆ ನೀಡಿದ್ದಾರೆ. ಇದಕ್ಕೆ ಪೂರಕ ಎಂಬಂತೆ ಪಿಡಿಪಿಯನ್ನು ಬೆಂಬಲಿಸಲು ಸಿದ್ಧವಿರುವುದಾಗಿ ಕಾಂಗ್ರೆಸ್ ಮತ್ತು ಎನ್ಸಿ ಈಗಾಗಲೇ ತಿಳಿಸಿವೆ.
ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಡಿ.31 ರಂದು ಜಮ್ಮು- ಕಾಶ್ಮೀರ ರಾಜ್ಯಪಾಲರನ್ನು ಭೇಟಿಯಾಗಲಿದ್ದು, ಸರ್ಕಾರ ರಚನೆ ಹಕ್ಕು ಮಂಡಿಸುವ ಸಾಧ್ಯತೆ ಇದೆ.