Untitled Document
Sign Up | Login    
Dynamic website and Portals
  
December 30, 2014

ಪಿಕೆ ವಿರುದ್ಧ ಪ್ರತಿಭಟನೆ: ದೇಶದ ವಿವಿಧ ಚಿತ್ರ ಮಂದಿರಗಳ ಮೇಲೆ ದಾಳಿ

ಪಿಕೆ ವಿರುದ್ಧ  ಪ್ರತಿಭಟನೆ: ದೇಶದ ವಿವಿಧ ಚಿತ್ರ ಮಂದಿರಗಳ ಮೇಲೆ ದಾಳಿ

ನವದೆಹಲಿ : ಅಮೀರ್ ಖಾನ್ ನಟನೆಯ ಪಿಕೆ ಚಿತ್ರಕ್ಕೆ ರಾಜ್ಯವೂ ಸೇರಿದಂತೆ ದೇಶಾದ್ಯಂತ ಪ್ರತಿಭಟನೆ ವ್ಯಕ್ತವಾಗಿದ್ದು, ವಿಶ್ವ ಹಿಂದೂ ಪರಿಷತ್, ಭಜರಂಗದಳ ಕಾರ್ಯಕರ್ತರು ಪಿ.ಕೆ ಸಿನಿಮಾ ಪೋಸ್ಟರ್ ಗಳನ್ನು ಹರಿದುಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಿಕೆ ಸಿನಿಮಾದಲ್ಲಿ ಹಿಂದೂ ದೇವರುಗಳನ್ನು, ಧರ್ಮಗುರುಗಳನ್ನು ಅವಹೇಳನಕಾರಿಯಾಗಿ ಚಿತ್ರಿಸಿರುವುದರಿಂದ ದೇಶಾದ್ಯಂತ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಇದೀಗ ಕರ್ನಾಟಕದಲ್ಲೂ ವಿರೋಧ ವ್ಯಕ್ತವಾಗಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ಹಿಂದೂ ಸಂಘಟನೆಗಳ ಸದಸ್ಯರು ಪ್ರತಿಭಟನೆ ನಡೆಸಿದ್ದು ಚಿತ್ರವನ್ನು ಸ್ಥಗಿತಗೊಳಿಸುವಂತೆ ಒತ್ತಾಯಿಸಿದ್ದಾರೆ.

ಬೆಳಗಾವಿ, ಮುಂಬೈ ನಲ್ಲಿರುವ ವಿವಿಧ ಚಿತ್ರಮಂದಿರಗಳ ಮುಂಭಾಗದಲ್ಲಿ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು, ಪೋಸ್ಟರ್ ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಚಿತ್ರಮಂದಿರಗಳ ಕಿಟಕಿ ಗಾಜುಗಳನ್ನು ಧ್ವಂಸ ಮಾಡಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸುತ್ತಿದ್ದಂತೆಯೇ ದಾಳಿ ನಡೆಸಿದವರು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಪಿಕೆ ಚಿತ್ರವನ್ನು ನಿಷೇಧಿಸಬೇಕೆಂದು ಹಿಂದೂ ಸಂಘಟನೆಗಳು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿವೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Protest

ಕೆ ಎಸ್ ಒಯು ಮುಚ್ಚದಂತೆ ಎಬಿವಿಪಿ ಪ್ರತಿಭಟನೆ: ಲಘು ಲಾಠಿ ಪ್ರಹಾರ
  • ಕೆ ಎಸ್ ಒಯು ಮುಚ್ಚದಂತೆ ಎಬಿವಿಪಿ ಪ್ರತಿಭಟನೆ: ಲಘು ಲಾಠಿ ಪ್ರಹಾರ
  • ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವನ್ನು ಮುಚ್ಚಲು ಮುಂದಾಗಿರುವ ಸರ್ಕಾರದ ಕ್ರಮ ಖಂಡಿಸಿ ಎಬಿವಿಪಿ ಬೃಹತ್ ಪ್ರತಿಭಟನೆ ಅರಂಭಿಸಿದ್ದು, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.
  • ದೇಶವ್ಯಾಪಿ ಪೆಟ್ರೋಲ್ ಬಂಕ್ ಮುಷ್ಕರ ವಾಪಸ್
  • ಸಿಪಿಎಂ ಕಛೇರಿಗೆ ಮುತ್ತಿಗೆ: ಬಿ ಎಸ್ ಯಡಿಯೂರಪ್ಪ ಸೇರಿದಂತೆ ಹಲವರ ಬಂಧನ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited