ನವದೆಹಲಿ : 'ಹೊಸ ವರ್ಷಾಚರಣೆ' ವೇಳೆ ಉಗ್ರರು ಭಾರತದಲ್ಲಿ ವಿಧ್ವಂಸಕ ಕೃತ್ಯ ನಡೆಸುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.
ಪಾಕಿಸ್ತಾನದಿಂದ ದೆಹಲಿಗೆ 10 ಉಗ್ರರು ನುಸುಳಿದ್ದು ದೇಶದ ವಿವಿಧ ಭಾಗಗಳಲ್ಲಿ ವಿಧ್ವಂಸಕ ಕೃತ್ಯ ನಡೆಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಗುಪ್ತಚರ ಇಲಾಖೆ ಮಾಹಿತಿ ಮೇರೆಗೆ ಕಟ್ಟೆಚ್ಚರ ವಹಿಸಿರುವ ಪೊಲೀಸ್ ಅಧಿಕಾರಿಗಳು ಗುಪ್ತಚರ ಇಲಾಖೆ ಮಾಹಿತಿ ಮೇರೆಗೆ ದೆಹಲಿ ಹಾಗೂ ಗಾಜಿಯಾಬಾದ್ ನಲ್ಲಿ ಉಗ್ರರಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ.
200ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳನ್ನೊಳಗೊಂಡ ತಂಡ ಉಗ್ರರಿಗಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ. ಇತ್ತೀಚೆಗಷ್ಟೇ ಬೆಂಗಳೂರಿನಲ್ಲಿ ಬಾಂಬ್ ಸ್ಫೋಟಿಸಲಾಗಿತ್ತು. ಅಲ್ಲದೇ ಹೊಸ ವರ್ಷಾಚರಣೆ ಹಾಗೂ ಗಣರಾಜ್ಯೋತ್ಸವ ದಿನದಂದು ದೇಶದಲ್ಲಿ ವಿಧ್ವಂಸಕ ಕೃತ್ಯ ನಡೆಸುವುದಾಗಿ ಉಗ್ರರು ಯೋಜನೆ ರೂಪಿಸಿದ್ದಾರೆಂದು ಡಿ.16ರಂದೇ ಗುಪ್ತಚರ ಇಲಾಖೆ ಮಾಹಿತಿ ನೀಡಿ ಎಲ್ಲಾ ರಾಜ್ಯಗಳಿಗೂ ಕಟ್ಟೆಚ್ಚರ ವಹಿಸಲು ಸೂಚಿಸಿತ್ತು.
ಇತ್ತೀಚಿನ ವರದಿ ಪ್ರಕಾರ ವಿಧ್ವಂಸಕ ಕೃತ್ಯ ನಡೆಸುವ ಉದ್ದೇಶದಿಂದ ಪಾಕಿಸ್ತಾನದಿಂದ ದೆಹಲಿಗೆ 10 ಜನ ಉಗ್ರರು ನುಸುಳಿದ್ದಾರೆ ಎಂದು ಹೇಳಲಾಗಿದೆ.