Untitled Document
Sign Up | Login    
Dynamic website and Portals
  
December 31, 2014

ಶಾಲಾ ಪಠ್ಯಕ್ರಮದಲ್ಲಿ ಭಗವದ್ಗೀತೆ ಅಳವಡಿಕೆಗೆ ಹರ್ಯಾಣ ಸರ್ಕಾರ ನಿರ್ಧಾರ

ಹರ್ಯಾಣ : 'ಶಾಲಾ ಪಠ್ಯಕ್ರಮ'ದಲ್ಲಿ ಭಗವದ್ಗೀತೆಯನ್ನು ಅಳವಡಿಸಲು ಹರ್ಯಾಣ ಸರ್ಕಾರ ನಿರ್ಧರಿಸಿದೆ.

ಮುಂದಿನ ಶೈಕ್ಷಣಿಕ ವರ್ಷದಿಂದ 5ನೇ ತರಗತಿಯಿಂದ 12ನೇ ತರಗತಿ ವರೆಗೂ(ಪದವಿ ಪೂರ್ವ ಶಿಕ್ಷಣದ ದ್ವಿತೀಯ ವರ್ಷ) ಭಗವದ್ಗೀತೆ ಪಠ್ಯಕ್ರಮದಲ್ಲಿ ಅಳವಡಿಕೆಯಾಗಲಿದೆ.

ಹರ್ಯಾಣದ ಸಚಿವ ರಾಮ್ ಬೈಲಾಸ್ ಶರ್ಮಾ, ಭಗವದ್ಗೀತೆಯನ್ನು ಜ್ಞಾನದ ಸರ್ವೋಚ್ಚ ಮೂಲ ಎಂದು ಬಣ್ಣಿಸಿದ್ದು ಅದನ್ನು ಶಾಲಾ ಪಠ್ಯಕ್ರಮದಲ್ಲಿ ಅಳವಡಿಸುವುದಾಗಿ ತಿಳಿಸಿದ್ದಾರೆ. ಭಗವದ್ಗೀತೆಯ ಯಾವ ಶ್ಲೋಕಗಳನ್ನು ಪಠ್ಯಕ್ರಮದಲ್ಲಿ ಅಳವಡಿಸಬೇಕೆಂಬುದನ್ನು ಶಿಕ್ಷಣ ಸಮಿತಿ ನಿರ್ಧರಿಸಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಸರ್ಕಾರದ ನಿರ್ಧಾರಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್, ರಾಜ್ಯವನ್ನು ಕೇಸರಿಕರಣಗೊಳಿಸಲು ಬಿಡುವುದಿಲ್ಲ ಎಂದು ಎಚ್ಚರಿಸಿದೆ.

ಪಂಜಾಬ್ ವಿಶ್ವವಿದ್ಯಾನಿಲಯಸಮಾಜಶಾಸ್ತ್ರಜ್ಞ ಮಂಜಿತ್ ಸಿಂಗ್ ಸಹ ಸರ್ಕಾರದ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಶಾಲಾ ಪಠ್ಯಗಳಲ್ಲಿ ಭಗವದ್ಗೀತೆ ಅಳವಡಿಸಿದರೆ ಬಲಪಂಥೀಯ ಉಗ್ರವಾದಕ್ಕೆ ಪ್ರೋತ್ಸಾಹ ನೀಡಿದಂತಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited