Untitled Document
Sign Up | Login    
Dynamic website and Portals
  
December 31, 2014

ಅಮಿತ್ ಶಾ ಆಗಮನದ ಹಿಂದೆ ರಾಜ್ಯಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ : ಉಗ್ರಪ್ಪ

ಕಾಂಗ್ರೆಸ್ ಮುಖಂಡ ವಿ.ಎಸ್ ಉಗ್ರಪ್ಪ(ಸಂಗ್ರಹ ಚಿತ್ರ) ಕಾಂಗ್ರೆಸ್ ಮುಖಂಡ ವಿ.ಎಸ್ ಉಗ್ರಪ್ಪ(ಸಂಗ್ರಹ ಚಿತ್ರ)

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ಆಗಮಿಸುತ್ತಿರುವುದರ ಹಿಂದೆ ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರವಿದೆ ಎಂದು ವಿಧಾನಪರಿಷತ್ ಸದಸ್ಯ, ಕಾಂಗ್ರೆಸ್ ಮುಖಂಡ ಉಗ್ರಪ್ಪ ಆರೋಪಿಸಿದ್ದಾರೆ.

ಡಿ.31ರಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಉಗ್ರಪ್ಪ, ಬಿಜೆಪಿ ರಾಷ್ಟ್ರಧ್ಯಕ್ಷರು ರಾಜ್ಯಕ್ಕೆ ಆಗಮಿಸುತ್ತಿರುವುದು ಪಕ್ಷ ಸಂಘಟನೆ ದೃಷ್ಟಿಯಿಂದಲೋ ಅಥವಾ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಉದ್ದೇಶದಿಂದಲೋ ಎಂಬುದನ್ನು ಬಿಜೆಪಿ ಸ್ಪಷ್ಟಪಡಿಸಬೇಕೆಂದು ಒತ್ತಾಯಿಸಿದ್ದಾರೆ.

ಅಮಿತ್ ಶಾ ಬೆಂಗಳೂರಿಗೆ ಆಗಮಿಸುತ್ತಿರುವುದರ ಹಿಂದೆ ಪಕ್ಷ ಸಂಘಟನೆ ಉದ್ದೇಶಕ್ಕಿಂತಲೂ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಉದ್ದೇಶವಿದೆ ಎಂದು ಉಗ್ರಪ್ಪ ಗಂಭೀರ ಆರೋಪ ಮಾಡಿದ್ದಾರೆ. ಇಂತಹ ಉದ್ದೇಶದಿಂದ ರಾಜ್ಯಕ್ಕೆ ಆಗಮಿಸುತ್ತಿದ್ದರೆ ಅವರ ಪ್ರಯತ್ನ ವಿಫಲವಾಗುವುದು ಖಚಿತ, ಕರ್ನಾಟಕ ಸರ್ಕಾರವನ್ನು ಅಸ್ಥಿರಗೊಳಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ಇದೇ ವೇಳೆ ರಾಜ್ಯಕ್ಕೆ ಅಮಿತ್ ಶಾ ಆಗಮಿಸುತ್ತಿರುವುದಕ್ಕೆ ಕಾಂಗ್ರೆಸ್ ಪಕ್ಷದ ವಿರೋಧ ಇಲ್ಲ ಎಂದು ಉಗ್ರಪ್ಪ ಸ್ಪಷ್ಟಪಡಿಸಿದ್ದಾರೆ. ಆದರೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನು ಅಸ್ಥಿರಗೊಳಿಸಲೆಂದೇ ಅಮಿತ್ ಶಾ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ ಎಂಬ ಉಗ್ರಪ್ಪ ಅವರ ವಾದ ಅಚ್ಚರಿ ಮೂಡಿಸಿದೆ.

ಅಮಿತ್ ಶಾ ಜ.3ರಂದು ಬೆಂಗಳೂರಿಗೆ ಆಗಮಿಸಲಿದ್ದು ರಾಜ್ಯ ನಾಯಕರೊಂದಿಗೆ ಪಕ್ಷ ಸಂಘಟನೆ ಬಗ್ಗೆ ಚರ್ಚೆ ನಡೆಸಲಿದ್ದಾರೆ.

 

 

Share this page : 
 

Table 'bangalorewaves.bv_news_comments' doesn't exist