Untitled Document
Sign Up | Login    
Dynamic website and Portals
  
December 31, 2014

ಮಧ್ಯರಾತ್ರಿಯಿಂದ ಪೆಟ್ರೋಲ್, ಡಿಸೇಲ್ ದರ ಇಳಿಕೆ ಸಾಧ್ಯತೆ

Petrol Bunk Petrol Bunk

ನವದೆಹಲಿ : ಹೊಸ ವರ್ಷದ ಸಂಭ್ರಮಾಚರಣೆ ಬೆನ್ನಲ್ಲೇ ಪೆಟ್ರೋಲ್ ಹಾಗೂ ಡಿಸೇಲ್ ದರ ಇಳಿಕೆಯಾಗುವ ಸಾಧ್ಯತೆ ಇದೆ. ಡಿ.31ರ ಮಧ್ಯರಾತ್ರಿಯಿಂದ ಪೆಟ್ರೋಲ್ ಹಾಗೂ ಡಿಸೆಲ್ ದರವನ್ನು ಇಳಿಕೆ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡಿಸಿದೆ.

ಒಂದು ವೇಳೆ ಪೆಟ್ರೋಲ್, ಡಿಸೇಲ್ ದರ ಇಳಿಕೆಯಾದರೆ ಗ್ರಾಹಕರಿಗೆ ಹೊಸ ವರ್ಷದ ಉಡುಗೊರೆ ದೊರೆಯಲಿದ್ದು ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ ಅಸ್ಥಿತ್ವಕ್ಕೆ ಬಂದ ನಂತರ ಒಂಭತ್ತನೇ ಬಾರಿ ಪೆಟ್ರೋಲ್ ಹಾಗೂ ಐದನೇ ಬಾರಿ ಡೀಸೆಲ್ ಬೆಲೆಯನ್ನು ಇಳಿಸಿದಂತಾಗುತ್ತದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಪ್ರತಿ ಬ್ಯಾರೆಲ್ ಗೆ 9-10 ಡಾಲರ್ ಇಳಿಕೆಯಾಗಿರುವ ಪರಿಣಾಮ, ಕೇಂದ್ರ ಸರ್ಕಾರ ಪೆಟ್ರೋಲ್, ಡಿಸೇಲ್ ದರ ಇಳಿಕೆ ಮಾಡುವ ಸಾಧ್ಯತೆ ಇದೆ.

ಗೃಹ ಬಳಕೆ ವಸ್ತುಗಳು ಹಾಗೂ ಆಟೋ ಮೊಬೈಲ್‌ ಕ್ಷೇತ್ರಗಳಿಗೆ ನೀಡಲಾಗುತ್ತಿದ್ದ ಅಬಕಾರಿ ಸುಂಕ ವಿನಾಯಿತಿಯನ್ನು ರದ್ದು ಮಾಡುವ ಮೂಲಕ ಕೇಂದ್ರ ಸರ್ಕಾರ ಗೃಹೋಪಯೋಗಿ ವಸ್ತುಗಳನ್ನು ದುಬಾರಿಗೊಳಿಸಿತ್ತು. ಇದರಿಂದಾಗಿ ಸಾಮಾನ್ಯ ಜನರಿಗೆ ನಿರಾಸೆಯುಂಟಾಗಿತ್ತು. ಆದರೆ ಈಗ ಪೆಟ್ರೋಲ್, ಡಿಸೇಲ್ ದರ ಇಳಿಕೆ ಮಾಡುವ ಸೂಚನೆ ದೊರೆತಿದ್ದು, ಸಾರ್ವಜನಿಕರಿಗೆ ಕೇಂದ್ರ ಸರ್ಕಾರ ಹೊಸ ವರ್ಷದ ಉಡುಗೊರೆ ನೀಡಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Infrastructure

ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿಗೆ ಎನ್ ಜಿಟಿ ಅನುಮತಿ
  • ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿಗೆ ಎನ್ ಜಿಟಿ ಅನುಮತಿ
  • ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿಗೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್ ಜಿಟಿ) ಷರತ್ತುಬದ್ಧ ಅನುಮತಿಯನ್ನು ನೀಡಿದೆ.
  • ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಮತ್ತೆ ಇಳಿಕೆ
  • ಪೆಟ್ರೋಲ್, ಡೀಸೆಲ್ ದರ ಮತ್ತೆ ಇಳಿಕೆ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited