Untitled Document
Sign Up | Login    
Dynamic website and Portals
  
January 1, 2015

ಭಾರತದ ಒತ್ತಡಕ್ಕೆ ಮಣಿದು ಮತ್ತೆ ನನ್ನನ್ನು ಬಂಧಿಸಲಾಗಿದೆ: ಲಖ್ವಿ

ಇಸ್ಲಾಮಾಬಾದ್ : ಭಾರತದ ಒತ್ತಡಕ್ಕೆ ಮಣಿದು ನನ್ನ ವಿರುದ್ಧ ಸುಳ್ಳು ಆರೋಪ ಮಾಡಿ ಮತ್ತೆ ಬಂಧಿಸಲಾಗಿದೆ ಎಂದು ಮುಂಬೈ ದಾಳಿರೂವಾರಿ ಝಕೀವುರ್ ಲಖ್ವಿ ಹೇಳಿದ್ದಾನೆ.

ಇನ್ನೇನು ಜೈಲಿನಿಂದ ಬಿಡುಗಡೆ ಆಗಬೇಕು ಎನ್ನುವಷ್ಟರಲ್ಲಿ ಮತ್ತೆ ಜೈಲು ಸೇರಿದ ಲಖ್ವಿ, ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ, ಎಫ್‌ಐಆರ್ ದಾಖಲಿಸಲಾಗಿದೆ. ಪಾಕಿಸ್ತಾನ ಸರ್ಕಾರಕ್ಕೆ ಭಾರತ ಒತ್ತಡ ಹೇರುತ್ತಿದೆ ಎಂದು ಆರೋಪಿಸಿ, ಜಿಲ್ಲಾ ಮತ್ತು ಸೆಷನ್ ನ್ಯಾಯಾಲಯದಲ್ಲಿ ಬುಧವಾರ ಲಖ್ವಿ ಅರ್ಜಿ ಸಲ್ಲಿಸಿದ್ದಾನೆ.

ಭಾರತದ ಒತ್ತಡಕ್ಕೆ ಮಣಿದು ಪಾಕ್ ಸರ್ಕಾರ ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದೆ. ನನ್ನ ಕಕ್ಷಿದಾರನನ್ನು ಜೈಲಿನಲ್ಲೇ ಉಳಿಸಿಕೊಳ್ಳುವ ಹುನ್ನಾರ ನಡೆಸಲಾಗಿದೆ ಎಂದು ಲಖ್ವಿ ಪರ ವಕೀಲ ಹೇಳಿದ್ದಾರೆ.

ಅಪಹರಣ ಪ್ರಕರಣದ ಹೆಸರಲ್ಲಿ 2 ದಿನಗಳ ಮಟ್ಟಿಗೆ ಪಾಕಿಸ್ತಾನ ನ್ಯಾಯಾಲಯ ಲಖ್ವಿಯನ್ನು ಪೊಲೀಸ್ ವಶಕ್ಕೊಪ್ಪಿಸಿತ್ತು.
ಜಾಮೀನಿನ ಮೇಲೆ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದ್ದ ಲಖ್ವಿಯನ್ನು ಸಾರ್ವಜನಿಕ ಭದ್ರತಾ ಆದೇಶದನ್ವಯ ಪಾಕ್ ಸರ್ಕಾರ ಮತ್ತೆ ವಶಕ್ಕೆ ತೆಗೆದುಕೊಂಡಿತ್ತು. ಆದರೆ ಪಾಕ್ ಸರ್ಕಾರದ ಆದೇಶವನ್ನು ತಳ್ಳಿಹಾಕಿದ್ದ ಕೋರ್ಟ್ ಲಖ್ವಿಯನ್ನು ಡಿ.30ರ ಬೆಳಗ್ಗೆ ಬಿಡುಗಡೆಗೊಳಿಸುವಂತೆ ಸೂಚಿಸಿತ್ತು.

ಕೋರ್ಟ್ ಆದೇಶದ ಪ್ರತಿ ಜೈಲಧಿಕಾರಿಯ ಕೈ ಸೇರುವುದಕ್ಕೆ ಮುನ್ನ ಬೇರೊಂದು ಪ್ರಕರಣ ಸಂಬಂಧ ಆತ ಮತ್ತೆ ಜೈಲು ಸೇರುವಂತಾಗಿದೆ. ಮಹಮ್ಮದ್ ಅನ್ವರ್ ಎಂಬಾತನನ್ನು ಅಪಹರಣ ಮಾಡಿದ ಪ್ರಕರಣ ಸಂಬಂಧ ಡಿ.29ರಂದು ದೂರು ದಾಖಲಾಗಿತ್ತು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : General

ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಮೂರನೇ ಜಲಾಂತರ್ಗಾಮಿ ನೌಕೆ ಪ್ರಾಜೆಕ್ಟ್‌ 28ರ ಅಡಿಯಲ್ಲಿ ನಿರ್ಮಾಣಗೊಂಡ ಐಎನ್‌ಎಸ್‌ ಕಿಲ್ತಾನ್‌ ನೌಕೆಯನ್ನು ವಿಶಾಖಪಟ್ಟಣದ ನೌಕಾ ನೆಲೆಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಾರ್ಪಣೆ ಮಾಡಿದರು.
  • ಆರುಷಿ ಹತ್ಯೆ ಪ್ರಕರಣ: ತಲ್ವಾರ್ ದಂಪತಿಗಳು ಖುಲಾಸೆ;ಅಲಹಾಬಾದ್ ಹೈಕೋರ್ಟ್ ತೀರ್ಪು
  • ಅ.12ರ ಮಧ್ಯ ರಾತ್ರಿಯಿಂದ ಪೆಟ್ರೋಲ್ ಬಂಕ್ ಬಂದ್
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited