ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ ಜಾರಿಗೆ ತಂದ ಯೋಜನೆಗಳ ಪೈಕಿ ದೇಶದ ಜನತೆ ಸ್ವಚ್ಛ ಭಾರತ ಅಭಿಯಾನವನ್ನು ಅತಿ ಹೆಚ್ಚು ಇಷ್ಟಪಟ್ಟಿದ್ದಾರೆ.
ಟೈಮ್ಸ್ ಆಫ್ ಇಂಡಿಯಾ ಪತ್ರಿಕೆ ನಡೆಸಿದ ಸಮೀಕ್ಷೆಯಲ್ಲಿ, ದೇಶಾದ್ಯಂತ ನರೇಂದ್ರ ಮೋದಿ ಅವರ ಉಳಿದ ಎಲ್ಲಾ ಯೋಜನೆ/ಅಭಿಯಾನಗಳಿಗಿಂತ ಹೆಚ್ಚು ಸ್ವಚ್ಛ ಭಾರತ ಅಭಿಯಾನಕ್ಕೆ ಉತ್ತಮ ಮನ್ನಣೆ ದೊರೆತಿದೆ ಎಂದು ಹೇಳಿದೆ.
ದೆಹಲಿ, ಮುಂಬೈ, ಕೋಲ್ಕತ್ತಾ, ಚೆನ್ನೈ, ಬೆಂಗಳೂರು, ಹೈದರಾಬಾದ್, ಪುಣೆ, ಅಹಮದಾಬಾದ್ ನಲ್ಲಿ ಪ್ರಧಾನಿ ಮೋದಿ ಅವರ ಸ್ವಚ್ಛ ಭಾರತ ಅಭಿಯಾನವನ್ನು ಅತಿ ಹೆಚ್ಚು ಜನರು ಇಷ್ಟಪಟ್ಟಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.
ಪ್ರಮುಖವಾಗಿ ಮಹಾನಗರದ ಮಧ್ಯಮ ವರ್ಗಗಳು, ನರೇಂದ್ರ ಮೋದಿ ಅವರ ಸ್ವಚ್ಛ ಭಾರತ ಅಭಿಯಾನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಒಟ್ಟಾರೆ ಸಮೀಕ್ಷೆಯಲ್ಲಿ ಮೋದಿ ಅವರ ಸ್ವಚ್ಛ ಭಾರತ ಅಭಿಯಾನದ ಕ್ರಮಕ್ಕೆ ಶೇ.56ರಷ್ಟು ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಶೇ.18ರಷ್ಟು ಜನರು ಮೋದಿ ಅವರ ವಿದೇಶಾಂಗ ನೀತಿಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಶೇ.15ರಷ್ಟು ಜನರು, ಜನ್ ಧನ್ ಯೋಜನೆಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.
18 ವರ್ಷಕ್ಕಿಂತ ಮೇಲ್ಪಟ್ಟ 1,200 ಮಹಿಳೆಯರು ಹಾಗೂ ಪುರುಷರನ್ನು ಟೈಮ್ಸ್ ಆಫ್ ಇಂಡಿಯಾ ಸಂದರ್ಶಿಸಿ ಸಮೀಕ್ಷೆ ನಡೆಸಿದೆ.