Untitled Document
Sign Up | Login    
Dynamic website and Portals
  
January 1, 2015

ಬಸ್ ಪ್ರಯಾಣ ದರ ಇಳಿಕೆ ಪ್ರಸ್ತಾವನೆ ತಿರಸ್ಕಾರ

ಸಿಎಂ ಸಿದ್ದರಾಮಯ್ಯ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಬಸ್ ಪ್ರಯಾಣದರ ಇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಾರಿಗೆ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರಸ್ಕರಿಸಿದ್ದಾರೆ.

ನಿರಂತರವಾಗಿ ಡೀಸೆಲ್ ದರ ಇಳಿಕೆಯಾದ ಹಿನ್ನಲೆಯಲ್ಲಿ ಸಾರಿಗೆ ಇಲಾಖೆ ಬಸ್ ಪ್ರಯಾಣ ದರ ಇಳಿಸಲು ಮುಂದಾಗಿತ್ತು. ಈ ಹಿನ್ನಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಡಿ.30ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪ್ರಸ್ತಾವನೆ ಸಲ್ಲಿಸಿದ್ದರು.

ಶೇ.3-4ರಷ್ಟು ಪ್ರಯಾಣದ ಇಳಿಕೆ ಮಾಡುವ ಬಗ್ಗೆ ಸಚಿವರು ಸಿಎಂ ಸಿದ್ದರಾಮಯ್ಯನವರಲ್ಲಿ ಮನವಿ ಮಾಡಿದ್ದರು. ಆದರೆ ಸಚಿವರ ಮನವಿಯನ್ನು ಸರ್ಕಾರ ತಿರಸ್ಕರಿಸಿದೆ.

ಬಸ್ ಪ್ರಯಾಣದರ ಇಳಿಕೆ ಸಾದಕ-ಬಾದಕಗಳ ಬಗ್ಗೆ ಸಿಎಂ ಜತೆ ಚರ್ಚೆ ನಡೆಸಿ ಶೀಘ್ರದಲ್ಲಿ ನಿರ್ಧರಸಲಾಗುವುದು ಎಂದು ಸಚಿವ ರಾಮಲಿಂಗಾರೆಡ್ಡಿ ಬೆಳಗಾವಿ ಅಧಿವೇಶನದ ವೇಳೆ ಕೂಡ ತಿಳಿಸಿದ್ದರು. ಆದರೆ ಈಗ ಸಸಿದ್ದರಾಮಯ್ಯ ಸರ್ಕಾರ ದರ ಇಳಿಕೆ ಪ್ರಸ್ತಾವನೆ ತಿರಸ್ಕರಿಸಿದೆ. ಈ ಮೂಲಕ ಡೀಸೆಲ್ ದರ ಇಳಿಕೆಯಾದಲ್ಲಿ ಬಸ್ ಪ್ರಯಾಣ ದರ ಇಳಿಕೆ ಮಾಡುವುದಾಗಿ ಭರವಸೆ ನೀಡಿದ್ದ ಸರ್ಕಾರ ಈಗ ಕೊಟ್ಟಮಾತಿಗೆ ತಪ್ಪಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited