Untitled Document
Sign Up | Login    
Dynamic website and Portals
  
January 2, 2015

ಜಮ್ಮು-ಕಾಶ್ಮೀರ ಸರ್ಕಾರ ರಚನೆ ಪ್ರಕ್ರಿಯೆಯಲ್ಲಿ ಪ್ರತ್ಯೇಕವಾದಿಗಳ ಹಸ್ತಕ್ಷೇಪ!

ಪ್ರತ್ಯೇಕವಾದಿ ನಾಯಕ ಅಬ್ದುಲ್ ಘನಿ ಭಟ್ ಪ್ರತ್ಯೇಕವಾದಿ ನಾಯಕ ಅಬ್ದುಲ್ ಘನಿ ಭಟ್

ಜಮ್ಮು-ಕಾಶ್ಮೀರ : 'ಜಮ್ಮು-ಕಾಶ್ಮೀರ'ದ ರಾಜಕಾರಣದ ಇತಿಹಾಸದಲ್ಲೇ ಮೊದಲಿಗೆ ಪ್ರತ್ಯೇಕವಾದಿ ನಾಯಕ ಸರ್ಕಾರ ರಚನೆ ಬಗ್ಗೆ ರಾಜಕೀಯ ಪಕ್ಷಗಳೊಂದಿಗೆ ಸೌಹಾರ್ದಯುತ ಮಾತುಕತೆ ನಡೆಸಿದ್ದಾರೆ.

ಬಿಜೆಪಿ-ಪಿಡಿಪಿ ಸಮ್ಮಿಶ್ರ ಸರ್ಕಾರ ರಚನೆ ಮಾಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹುರಿಯತ್ ಕಾನ್ಫರೆನ್ಸ್ ನ ನಾಯಕ, ಅಬ್ದುಲ್ ಘನಿ ಭಟ್ ಪಿಡಿಪಿ ಮುಖ್ಯಸ್ಥ ಮುಫ್ತಿ ಮಹಮ್ಮದ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚನೆ ಸಂಬಂಧ ಪಿಡಿಪಿ ರಾಜ್ಯಪಾಲರೊಂದಿಗೆ ಚರ್ಚೆ ನಡೆಸಿದ ಬೆನ್ನಲ್ಲೇ ಈ ಬೆಳವಣಿಗೆ ಕಂಡುಬಂದಿದೆ.

ಪಿಡಿಪಿ ಮುಖ್ಯಸ್ಥರನ್ನು ಭೇಟಿ ಮಾಡಿರುವುದರ ಬಗ್ಗೆ ಪ್ರತಿಕ್ರಿಯಿಸಿರುವ ಅಬ್ದುಲ್ ಘನಿ ಭಟ್, ರಾಜಕೀಯ, ಸರ್ಕಾರ ರಚನೆಯಲ್ಲಿ ಏನೂ ನಡೆಯಬಹುದು ಎಂದು ಮಾರ್ಮಿಕವಾಗಿ ಪ್ರತಿಕ್ರಿಯಿಸಿದ್ದಾರೆ.

ಘನಿ ಭಟ್, ಬಿಜೆಪಿ-ಪಿಡಿಪಿ ಸಮ್ಮಿಶ್ರ ಸರ್ಕಾರದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲವಾದರೂ ಸರ್ಕಾರ ರಚನೆ ಪ್ರಕ್ರಿಯೆಯಲ್ಲಿ ಪ್ರತ್ಯೇಕವಾದದ ಹುರಿಯತ್ ಕಾನ್ಫರೆನ್ಸ್ ನ ನಾಯಕ ಪಾಲ್ಗೊಳ್ಳುತ್ತಿರುವುದೇ ಎಲ್ಲರ ಹುಬ್ಬೇರುವಂತೆ ಮಾಡಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited