ಕೊಲ್ಕತ್ತಾ : ಕಚ್ಛಾ ಬಾಂಬ್ ಸ್ಫೋಟಗೊಂಡ ಪರಿಣಾಮ ಇಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ಸಂಭವಿಸಿದೆ.
ದುರ್ಗಾಪುರದ ಪ್ರದೇಶವೊಂದರಲ್ಲಿ ಬೆಳಿಗ್ಗೆ ಕಚ್ಛಾ ಬಾಂಬ್ ತಯಾರಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಬಾಂಬ್ ಸ್ಫೋಟವಾಗಿದೆ. ಈ ಸಂದರ್ಭದಲ್ಲಿ ಬಾಂಬ್ ತಯಾಕೆಯಲ್ಲಿ ತೊಡಗಿದ್ದ ಇಬ್ಬರಿಗೆ ತೀವ್ರ ಗಾಯಗಳಾಗಿದೆ. ಗಾಯಾಳುಗಳನ್ನು ಬುರ್ದ್ವಾನ್ ವೈದ್ಯಕೀಯ ಜಿಲ್ಲಾಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
ಬಾಂಬ್ ತಯಾರಿಸುತ್ತಿದ್ದವರಿಗೂ ಉಗ್ರರಿಗೂ ಸಂಬಂಧವಿದೆಯೇ ಎಂಬ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಘಟನೆ ಸಂಬಂಧ ದುರ್ಗಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಗಾಯಾಳುಗಳನ್ನು ವಿಚಾರಣೆಗೊಳಪಡಿಸಿದ್ದಾರೆ.