ನವದೆಹಲಿ : 'ದೆಹಲಿ ವಿಧಾನಸಭೆ'ಗೆ ನಡೆಯಲಿರುವ ಚುನಾವಣೆಗೂ ಮುನ್ನ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ನೂತನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ ಮಾಡಲಿದ್ದಾರೆ.
ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಲ್ಲಿದ್ದ ಪಕ್ಷದ ಕೆಲವು ನಾಯಕರು, ಪ್ರಧಾನಿ ನರೇಂದ್ರ ಮೋದಿ ಸಚಿವ ಸಂಪುಟ ಸೇರಿರುವ ಹಿನ್ನೆಲೆಯಲ್ಲಿ ಅಮಿತ್ ಶಾ, ಖಾಲಿ ಇರುವ ಸ್ಥಾನಗಳಿಗೆ ನೇಮಕಾತಿ ಮಾಡಲಿದ್ದಾರೆ ಎಂದು ಹೇಳಲಾಗಿದೆ. ದೆಹಲಿ ಚುನಾವಣೆ ಸದ್ಯದಲ್ಲೇ ನಡೆಯಲಿದ್ದು ಇದು ಬಿಜೆಪಿಗೆ ಪ್ರತಿಷ್ಟೆಯ ಪ್ರಶ್ನೆಯಾಗಿದೆ. ಈ ಹಿನ್ನೆಲೆಯಲ್ಲಿ ಚುನಾವಣೆಗೂ ಮುನ್ನ ಬಿಜೆಪಿ ರಾಷ್ಟ್ರಾಧ್ಯಕ್ಷರು ನೂತನ ತಂಡವನ್ನು ಅಸ್ಥಿತ್ವಕ್ಕೆ ತರಬೇಕಿದೆ.
ಕೆಲವೇ ದಿನಗಳಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳನ್ನು ಘೋಷಿಸುವ ಸಾಧ್ಯತೆ ಇದೆ.
ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾಗಿದ್ದ ರಾಜೀವ್ ಪ್ರತಾಪ್ ರೂಡಿ, ಜೆಪಿ ನಡ್ಡಾ ಸೇರಿದಂತೆ ಹಲವರು ನರೇಂದ್ರ ಮೋದಿ ಸಚಿವ ಸಂಪುಟ ಸೇರಿರುವುದರಿಂದ ಈ ಹುದ್ದೆ ತೆರವುಗೊಂಡಿತ್ತು.