Untitled Document
Sign Up | Login    
Dynamic website and Portals
  
January 2, 2015

ಬೆಂಗಳೂರು ಬಾಂಬ್ ಬ್ಲಾಸ್ಟ್‌ಗೆ ಕಾಂಗ್ರೆಸ್ ಕಾರಣ: ಆರ್. ಅಶೋಕ್

ಆರ್. ಅಶೋಕ್ ಆರ್. ಅಶೋಕ್

BW News Bureau : ಇತ್ತೀಚೆಗೆ ಚರ್ಚ್ ರಸ್ತೆಯ ಕೋಕನಟ್ ಗ್ರೋವ್ ಹೊಟೇಲ್ ಸಮೀಪ ಸಂಭವಿಸಿದ ಬಾಂಬ್ ಸ್ಫೋಟಕ್ಕೆ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಆರೋಪಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಆಡಳಿತದ ಅವಧಿಯಲ್ಲಿ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆ ಸಂಭವಿಸಲು ಅವಕಾಶ ಕೊಟ್ಟಿರಲಿಲ್ಲ. ಆದರೆ, ಕಾಂಗ್ರೆಸ್ ಸರ್ಕಾರ ಬಂದ ನಂತರ ನಗರದಲ್ಲಿ ಬಾಂಬ್ ಬ್ಲಾಸ್ಟ್ ಸಂಭವಿಸಿ ಮಹಿಳೆಯೊಬ್ಬರು ಮೃತಪಟ್ಟಿರುವುದು ದುರಂತವೇ ಸರಿ ಎಂದರು.

ಕಾಂಗ್ರೆಸ್ ಸರ್ಕಾರದ ಉದಾಸೀನ ಹಾಗೂ ಭದ್ರತಾ ವೈಫಲ್ಯವೇ ಶಾಂತಿಯುತವಾಗಿದ್ದ ಬೆಂಗಳೂರಿನಲ್ಲಿ ರಕ್ತಕ್ರಾಂತಿಯಾಗಲು ಕಾರಣ ಎಂದು ದೂರಿದರು.

ಇನ್ನು ಮುಂದಾದರೂ ಸರ್ಕಾರ ನಿದ್ರಾವಸ್ಥೆಯಿಂದ ಎಚ್ಚೆತ್ತುಕೊಂಡು ಬೆಂಗಳೂರು ನಗರದ ನಾಗರಿಕರ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಅಶೋಕ್ ಒತ್ತಾಯಿಸಿದರು.

ಜ.3ರಂದು ಬೆಂಗಳೂರಿನಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಸಭೆಯಲ್ಲಿ ಪಾಲ್ಗೊಳ್ಳಲು ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸಂಜೆ ನಗರಕ್ಕೆ ಆಗಮಿಸುತ್ತಿದ್ದಾರೆ ಎಂದರು. ಸಭೆಯಲ್ಲಿ ಕಾಂಗ್ರೆಸ್ ಸರ್ಕಾರದ ವೈಫಲ್ಯ ಹಾಗೂ ಸರ್ಕಾರದ ವಿರುದ್ಧ ಕೈಗೊಳ್ಳಬೇಕಾದ ಹೋರಾಟದ ರೂಪುರೇಷೆಗಳ ಬಗ್ಗೆ ಗಹನವಾದ ಚರ್ಚೆ ನಡೆಸಿ ಮುಂದೆ ಹಮ್ಮಿಕೊಳ್ಳಬೇಕಾದ ಹೋರಾಟದ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited