Untitled Document
Sign Up | Login    
Dynamic website and Portals
  
January 2, 2015

ಪಾಕಿಸ್ತಾನ ಜಮ್ಮು-ಕಾಶ್ಮೀರಕ್ಕೆ ಉಗ್ರರನ್ನು ಕಳಿಸುತ್ತಿದೆ: ರಾಜನಾಥ್ ಸಿಂಗ್

ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್

ನವದೆಹಲಿ : 'ಪಾಕಿಸ್ತಾನ' ಜಮ್ಮು-ಕಾಶ್ಮೀರದೊಳಕ್ಕೆ ಉಗ್ರರನ್ನು ಕಳಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಆರೋಪಿಸಿದ್ದಾರೆ. ಉಗ್ರರನ್ನು ಭಾರತದೊಳಕ್ಕೆ ನುಗ್ಗಿಸುತ್ತಿರುವ ಪಾಕಿಸ್ತಾನ ಪದೇ ಪದೇ ಗಡಿ ಭಾಗದಲ್ಲಿ ನಡೆಯುತ್ತಿರುವ ಗುಂಡಿನ ದಾಳಿಗೆ ಉತ್ತೇಜನ ನೀಡುತ್ತಿದೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.

ಪಾಕಿಸ್ತಾನ ಪದೇ ಪದೇ ಗುಂಡಿನ ದಾಳಿ ನಡೆಸುತ್ತಿರುವುದರ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ರಾಜನಾಥ್ ಸಿಂಗ್, ಜಮ್ಮು-ಕಾಶ್ಮೀರಕ್ಕೆ ಪಾಕಿಸ್ತಾನ ಉಗ್ರರನ್ನು ಕಳಿಸುತ್ತಿದೆ ಎಂಬುದರ ಬಗ್ಗೆ ಯಾವುದೇ ಅನುಮಾನಗಳಿಲ್ಲ ಎಂದಿದ್ದಾರೆ.

ಭಾರತದ ವಿರುದ್ಧ ಪಾಕಿಸ್ತಾನ ನಡೆಸುತ್ತಿರುವ ಗುಂಡಿನ ದಾಳಿಗೆ ಬಿ.ಎಸ್.ಎಫ್ ಯೋಧರು ತಕ್ಕ ಉತ್ತರ ನೀಡುತ್ತಿದ್ದಾರೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ. ಬಿ.ಎಸ್.ಎಫ್ ಯೋಧರ ಗುಂಡಿನ ದಾಳಿಗೆ ಪಾಕ್ ಸರ್ಕಾರ ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಗೃಹ ಸಚಿವರು ಉತ್ತರಿಸಿದ್ದು, ಗುಂಡಿನ ದಾಳಿ ಪ್ರಾರಂಭಿಸಿದ್ದು ಪಾಕಿಸ್ತಾನ. ನಾವು ಅದಕ್ಕೆ ಉತ್ತರ ನೀಡುತ್ತಿದ್ದೇವೆ ಅಷ್ಟೇ ಎಂದು ಹೇಳಿದ್ದಾರೆ.

ಜಮ್ಮು-ಕಾಶ್ಮೀರದ ಸೇನಾ ಕ್ಯಾಂಪ್ ಗಳ ಮೇಲೆ ಪಾಕಿಸ್ತಾನ ನಿರಂತರವಾಗಿ ಗುಂಡಿನ ದಾಳಿ ನಡೆಸುತ್ತಿದ್ದು, ಕದನ ವಿರಾಮ ಉಲ್ಲಂಘನೆ ಮಾಡುತ್ತಿದೆ. ಪಾಕಿಸ್ತಾನಕ್ಕೆ ಗುಂಡಿನ ಭಾಷೆ ಮಾತ್ರ ಅರ್ಥವಾಗುತ್ತದೆ ಎಂದು ಜ.1ರಂದು ರಕ್ಷಣಾ ಸಚಿವ ಮನೋಹರ್ ಪರೀಕ್ಕರ್ ಹೇಳಿದ್ದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited