Untitled Document
Sign Up | Login    
Dynamic website and Portals
  
January 3, 2015

ಐವರು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನೇಮಕ ಸಾಧ್ಯತೆ

ನವದೆಹಲಿ : 'ಬಿಜೆಪಿ' ರಾಷ್ಟ್ರಾಧ್ಯಕ್ಷ ಅಮಿತ್ ಶಾ ಪಕ್ಷಕ್ಕೆ 5 ರಾಷ್ಟ್ರೀಯ ಪ್ರಧಾನಕಾರ್ಯದರ್ಶಿಗಳನ್ನು ನೇಮಕ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ದೆಹಲಿ ಚುನಾವಣೆಗೂ ಮುನ್ನ ನೇಮಕವಾಗಲಿರುವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಲ್ಲಿ ಜಾರ್ಖಂಡ್, ಮಧ್ಯಪ್ರದೇಶ, ಬಿಹಾರ, ಕರ್ನಾಟಕದವರೂ ಇರಲಿದ್ದಾರೆ.

ಮಧ್ಯಪ್ರದೇಶದ ಸಚಿವ ಕೈಲಾಶ್ ವಿಜಯ್ ವಾರ್ಗಿಯಾ, ಬಿಹಾರಬಿಜೆಪಿ ನಾಯಕ ನಂದ ಕಿಶೋರ್ ಯಾದವ್,ಶಹನವಾಜ್ ಹುಸೇನ್, ಜಾರ್ಖಂಡ್ ನ ಮಾಜಿ ಮುಖ್ಯಮಂತ್ರಿ ಅರ್ಜುನ್ ಮುಂಡಾ, ಹಾಗೂ ಕರ್ನಾಟಕದಿಂದ ಆರ್.ಅಶೋಕ್ ನೇಮಕಗೊಳ್ಳುವ ಸಾಧ್ಯತೆ ಇದೆ.

ಆದರೆ ಈ ಬಗ್ಗೆ ಯಾವುದೇ ಅಧಿಕೃತ ಪ್ರಕಟಣೆಯೂ ಈವರೆಗೆ ಬಿಡುಗಡೆಯಾಗಿಲ್ಲ. ಇದೇ ವೇಳೆ ಆರ್.ಅಶೋಕ್ ರಾಷ್ಟ್ರ‍ೀಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ನೇಮಕಗೊಳ್ಳುವ ಸಾಧ್ಯತೆಗಳನ್ನು ತಳ್ಳಿಹಾಕಿರುವ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ, ಆರ್.ಅಶೋಕ್ ಅವರನ್ನು ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸ್ಥಾನಕ್ಕೆ ನೇಮಿಸುವ ಬಗ್ಗೆ ಪಕ್ಷದಲ್ಲಿ ಚರ್ಚೆ ನಡೆದಿಲ್ಲ ಎಂದು ಹೇಳಿದ್ದಾರೆ.

ರಾಷ್ಟ್ರೀಯ ನಾಯಕರಿಂದಲೂ ಅಶೋಕ್ ನೇಮಕದ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಪ್ರಹ್ಲಾದ್ ಜೋಷಿ ಸ್ಪಷ್ಟಪಡಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited