ನವದೆಹಲಿ : ನೂತನ ಶಿಕ್ಷಣ ನೀತಿಯನ್ನು ಶೀಘ್ರದಲ್ಲೇ ಎಲ್ಲ ರಾಜ್ಯಗಳಲ್ಲೂ ಅನುಷ್ಠಾನಗೊಳಿಸಲಾಗುವುದು ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ತಿಳಿಸಿದ್ದಾರೆ.
ಹೊಸ ಶಿಕ್ಷಣ ನೀತಿಯಲ್ಲಿ ವಿಕಲ ಚೇತನರಿಗೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಪರಿಗಣಿಸಲಾಗಿದೆ ಮತ್ತು ಆ ಮೂಲಕ ಅವರಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುವ ಅವಕಾಶವನ್ನು ಕಲ್ಪಿಸಲಾಗಿದೆ ಎಂದರು.
ಹೊಸ ಶಿಕ್ಷಣ ನೀತಿಯನ್ನು ಎಲ್ಲ ರಾಜ್ಯಗಳಲ್ಲಿ ಮತ್ತು ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಆಗಬೇಕಾದ ಕೆಲಸಗಳು ಮಾನವ ಸಂಪನ್ಮೂಲ ಇಲಾಖೆಯಲ್ಲಿ ತುರ್ತು ಗತಿಯಲ್ಲಿ ಸಾಗುತ್ತಿವೆ ಮತ್ತು ಬೇಗನೆ ಇದನ್ನು ಅಂತಿಮಗೊಳಿಸಿ ಎಲ್ಲರ ಪ್ರಯೋಜನಕ್ಕೆ ತರಲಾಗುವುದು ಎಂದು ಸ್ಮೃತಿ ಇರಾನಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.