Untitled Document
Sign Up | Login    
Dynamic website and Portals
  
January 8, 2015

ಪ್ರವಾಸಿ ಭಾರತೀಯ ದಿನಾಚರಣೆಗೆ ಪ್ರಧಾನಿ ಮೋದಿ ಚಾಲನೆ

ನರೇಂದ್ರ ಮೋದಿ ನರೇಂದ್ರ ಮೋದಿ

ಗಾಂಧಿನಗರ : ಗುಜರಾತ್ ನ ಗಾಂಧೀನಗರದಲ್ಲಿ ನಡೆಯುತ್ತಿರುವ 13ನೇ ಪ್ರವಾಸಿ ಭಾರತೀಯ ದಿನಾಚರಣೆಗೆ ಪ್ರಧಾನಿ ನರೇಂದ್ರ ಮೋದಿ ಜ.8ರಂದು ಚಾಲನೆ ನೀಡಿದ್ದಾರೆ.

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಇಂದು ಭಾರತದ ಸಾಮರ್ಥ್ಯ ಹೆಚ್ಚಿದ್ದು ವಿಶ್ವದ 200ಕ್ಕೂ ಹೆಚ್ಚು ದೇಶದಲ್ಲಿ ಭಾರತೀಯರು ಇದ್ದಾರೆ ಎಂದು ಹೇಳಿದ್ದಾರೆ.

ನಮ್ಮ ಪೂರ್ವಜರು ಅವಕಾಶಗಳನ್ನು ಅರಸಿ, ಸುಶಿಕ್ಷಿತರು ಜ್ನಾನವನ್ನು ಅರಸಿ ವಿದೇಶಕ್ಕೆ ಹೋಗಿದ್ದರು. ಆದರೆ ಈಗ ಭಾರತದಲ್ಲೇ ಸಾಕಷ್ಟು ಅವಕಾಶಗಳಿದ್ದು, ಹೊಸ ಅವಕಾಶಗಳು ಭಾರತೀಯರನ್ನು ಕೈಬೀಸಿ ಕರೆಯುತ್ತಿವೆ ಎಂದು ಮೋದಿ ಹೇಳಿದ್ದಾರೆ.

ಮಹಾತ್ಮಾ ಗಾಂಧಿ ನೀಡಿದ್ದ ಸ್ವರಾಜ್ಯ, ಸ್ವಾವಲಂಬನೆ ಸಂದೇಶ ಇಂದಿಗೂ ಪ್ರಸ್ತುತವಾಗಿದ್ದು, ಇಡೀ ವಿಶ್ವ ಭಾರತದತ್ತ ನೋಡುತ್ತಿದೆ. ಭಾರತ ಮಹಾನ್ ಶಕ್ತಿಯಾಗಿ ಹೊರಹೊಮ್ಮುತ್ತಿದ್ದು, ಆ ಶಕ್ತಿಯನ್ನು ಸಂಘಟಿಸುವ ಅಗತ್ಯವಿದೆ ಎಂದು ಮೋದಿ ಅಭಿಪ್ರಾಯಪಟ್ಟಿದ್ದಾರೆ.

ಕಾರ್ಯಕ್ರಮಕ್ಕೆ ಚಾಲನೆ ನೀಡುವುದಕ್ಕೂ ಮುನ್ನ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿ ಮಾತನಾಡಿದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನವಿಲ್ಲದೇ ಪ್ರವಾಸಿ ಭಾರತೀಯ ದಿನವನ್ನು ಇಷ್ಟು ದೊಡ್ಡಮಟ್ಟದಲ್ಲಿ ಆಯೋಜಿಸಲು ಸಾಧ್ಯವಾಗುತ್ತಿರಲಿಲ್ಲ. ಅನಿವಾಸಿ ಭಾರತೀಯರನ್ನು ತಲುಪಲು ಪ್ರಧಾನಿ ನರೇಂದ್ರ ಮೋದಿ ಸ್ವತಃ ಆಸಕ್ತಿ ವಹಿಸಿದ್ದಾರೆ ಎಂದು ಸುಷ್ಮಾ ಸ್ವರಾಜ್ ಹೇಳಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited