Untitled Document
Sign Up | Login    
Dynamic website and Portals
  
January 8, 2015

ಪ್ಯಾರಿಸ್ ನ ಲಿಯಾನ್ ಬಳಿ ಸ್ಫೋಟ

ಪ್ಯಾರಿಸ್ : ಫ್ರಾನ್ಸ್ ನ ಪ್ಯಾರಿಸ್ ನಗರದ ಲಿಯಾನ್ ಬಳಿ ಸ್ಫೋಟ ಸಂಭವಿಸಿದ್ದು, ಇಬ್ಬರು ಅಧಿಕಾರಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕೆಲ ಸಮಯದ ಹಿಂದಷ್ಟೇ ದಕ್ಷಿಣ ಪ್ಯಾರಿಸ್ ನಲ್ಲಿ ಪೊಲೀಸರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆದ ಬೆನ್ನಲ್ಲೇ ಪ್ಯಾರಿಸ್ ನ ಮಸೀದಿ ಪಕ್ಕದಲ್ಲಿರುವ ಕಟ್ಟದಲ್ಲಿರುವ ರೆಸ್ಟೋರೆಂಟ್ ಒಂದರಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ.

ಕೆಲ ಸಮಯದ ಹಿಂದೆ ಪೊಲೀಸರನ್ನು ಗುರಿಯಾಗಿಸಿಕೊಂಡು ಇಬ್ಬರು ಅಪರಿಚಿತ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿದ್ದರು. ಈ ಫೈರಿಂಗ್ ನಡೆಸಿದ ಆಗಂತುಕರೇ ಬಾಂಬ್ ಸ್ಫೋಟ್ ಮಾಡಿದ್ದಾರೆ ಎಂದು ಶಂಕಿಸಲಾಗಿದೆ. ಸ್ಫೋಟದಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆ ಬಳಿಕ ಉಗ್ರರು ಮೆಟ್ರೋ ರೈಲಿನ ಮೂಲಕ ಪರಾರಿಯಾಗಿದ್ದಾರೆ. ಉಗ್ರರಿಗಾಗಿ ತೀವ್ರ ಶೋಧ ಕಾರ್ಯ ಆರಂಭವಾಗಿದೆ.

ಜ.7ರಂದು ಪರ್ತಕರ್ತರನ್ನು ಗುರಿಯಾಗಿಸಿಕೊಂಡು ಚಾರ್ಲೆ ಹೆಬ್ಡೂ ಪತ್ರಿಕಾ ಕಛೇರಿಯ ಮೇಲೆ ಉಗ್ರರು ಅಟ್ಟಹಾಸ ಮೆರೆದಿದ್ದರು. ಘಟನೆಯಲ್ಲಿ 12 ಜನರು ಬಲಿಯಾಗಿದ್ದರು. ಇಂದು ಪೊಲೀಸರನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ. ಪತ್ರಿಕಾ ಕಛೇರಿ ದಾಳಿ ಸಂಬಂಧ ಈಗಾಗಲೇ ಏಳು ಶಂಕಿತ ಉಗ್ರರನ್ನು ವಶಕ್ಕೆ ಪಡೆದು, ವಿಚಾರಣೆಗೊಳಪಡಿಸಲಾಗಿದೆ. ಈ ನಡುವೆ ಉಗ್ರರ ದಾಳಿ ಹಿನ್ನಲೆಯಲ್ಲಿ ಫ್ರಾನ್ಸ್ ಅಧ್ಯಕ್ಷ ಫ್ರಾಂಕೋಯಿಸ್ ಹೊಲಾಂಡೆ ತುರ್ತು ಸಭೆ ಕರೆದಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Crime

ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಬೆಂಗಳೂರಿನ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
  • ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿದ ಎಸ್ ಐ ಟಿ
  • ಸೈನೈಡ್ ಮೋಹನ್ ಗೆ ಜೀವಾವಧಿ ಜೈಲು ಶಿಕ್ಷೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited