Untitled Document
Sign Up | Login    
Dynamic website and Portals
  
January 12, 2015

ದೆಹಲಿ ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ

ವಿ.ಎಸ್.ಸಂಪತ್ ವಿ.ಎಸ್.ಸಂಪತ್

ನವದೆಹಲಿ : ದೆಹಲಿ ವಿಧಾನಸಭೆಗೆ ಫೆ.7ರಂದು ಮತದಾನ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ವಿ.ಎಸ್.ಸಂಪತ್ ಘೋಷಿಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ದೆಹಲಿ ವಿಧಾನಸಭಾ ಚುನಾವನೆಯ ದಿನಾಂಕ ಪ್ರಕಟಿಸಿದರು.

ಫೆ.7ರಂದು ದೆಹಲಿಯಲ್ಲಿ ಚುನಾವಣೆ ನಡೆಯಲಿದ್ದು, 7೦ ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಫೆ.೧೦ರಂದು ಫಲಿತಾಂಶ ಪ್ರಕಟಿಸಲಾಗುವುದು ಎಂದು ತಿಳಿಸಿದರು. ದೆಹಲಿಯಲ್ಲಿ ಫೆ.15ಕ್ಕೆ ರಾಷ್ಟ್ರಪತಿ ಆಡಳಿತ ಅಂತ್ಯವಾಗಲಿದೆ ಎಂದರು.

ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೊಳ್ಳಲಿದೆ. ಜ.14ರಂದು ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗಿವುದು. ನಾಮಪತ್ರ ಸಲ್ಲಿಸಲು ಜ.21 ಕೊನೆ ದಿನ. ಜ.22ರಂದು ನಾಮಪತ್ರಗಳ ಪರೀಷ್ಕರಣೆ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಜ.24 ಕೊನೆ ದಿನ ಎಂದು ವಿವರಿಸಿದರು.

ದೆಹಲಿಯಲ್ಲಿ ಒಟ್ಟು 1.3೦ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದು, ಒಟ್ಟು 11,763 ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು. ಮತದಾನಕ್ಕೆ ವಿದ್ಯುನ್ಮಾನ ಮತಯಂತ್ರಗಳ ಬಳಕೆಮಾಡಲಾಗುವುದು. 12 ಕ್ಷೇತ್ರಗಳು ಪರಿಶಿಷ್ಠಜಾತಿ ವರ್ಗಕ್ಕೆ ಮೀಸಲು ಎಂದು ತಿಳಿಸಿದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited