ಢಾಕಾ : ಮುಸ್ಲಿಂ ರಾಷ್ಟ್ರ ಬಾಂಗ್ಲಾ ದೇಶದಲ್ಲಿ ಇದೇ ಮೊದಲ ಬಾರಿಗೆ ಹಿಂದೂ ಒಬ್ಬರು ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದಾರೆ.
ಮುಸ್ಲಿಂ ಬಾಹುಳ್ಯವಿರುವ ದೇಶ ಬಾಂಗ್ಲಾದಲ್ಲಿ ಹಿಂದೂ ಸಮುದಾಯಕ್ಕೆ ಸೇರಿರುವವರೊಬ್ಬರು ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿರುವುದು ಎಲ್ಲರ ಹುಬ್ಬೇರಿಸಿದೆ.
ಬಾಂಗ್ಲಾ ಸುಪ್ರೀಂ ಕೋರ್ಟ್ನ ಹಿರಿಯ ನ್ಯಾಯಮೂರ್ತಿ ನ್ಯಾ.ಸುರೇಂದ್ರ ಕುಮಾರ್ ಸಿನ್ಹಾರನ್ನು ಸೋಮವಾರ ದೇಶದ ಅತ್ಯುನ್ನತ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಿಸಲಾಗಿದೆ. ಸಿನ್ಹಾ ಅವರು ಜ.17ರಂದು ಅಧಿಕಾರ ಸ್ವೀಕರಿಸಲಿದ್ದಾರೆ.
ಮತಾಂತರ, ಹಿಂದೂ ದೇವಾಲಯಗಳ ಧ್ವಂಸದಂತ ಹಿಂದೂ ವಿರೋಧಿ ಚಟುವಟಿಕೆಗಳನ್ನೇ ನಡೆಸಿಕೊಂಡು ಬಂದಿರುವ ಬಾಂಗ್ಲಾ ದೇಶದಲ್ಲಿ ಹಿಂದೂ ಒಬ್ಬರು ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿರುವುದು ಹಿಂದೂಗಳು ಹೆಮ್ಮೆಪಡುವ ವಿಷಯವಾಗಿದೆ.