Untitled Document
Sign Up | Login    
Dynamic website and Portals
  
January 13, 2015

ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ

ನವದೆಹಲಿ : ದೆಹಲಿ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ಆರಂಭವಾಗಿದೆ.

ದೆಹಲಿ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿಯಾದ ಬೆನ್ನಲ್ಲೇ ಸೋನಿಯಾ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ನ ಈ ಕಾರ್ಯಕಾರಿಣಿ ಸಭೆ ನಡೆಸುತ್ತಿದ್ದು, ಹಲವು ವಿಚಾರಗಳು ಚರ್ಚೆಗೆ ಬರುವುದರಿಂದ ಈ ಸಭೆ ಮಹತ್ವ ಪಡೆದುಕೊಂಡಿದೆ. ಲೊಕಸಭಾ ಚುನಾವಣೆ ಸೋಲಿನ ಬಳಿಕ ನಡೆಸುತ್ತಿರುವ ಕಾಂಗ್ರೆಸ್ ನ ಮೊದಲ ಸಭೆ ಕೂಡ ಇದಾಗಿದೆ.

ಕಳೆದ ಲೋಕಸಭಾ ಹಾಗೂ ಹಲವು ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿರುವುದರಿಂದ ಈ ಬಾರಿಯ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲೇ ಬೇಕು ಎಂಬ ನಿಟ್ಟಿನಲ್ಲಿ ರೂಪುರೇಷೆ ಸಿದ್ಧಪಡಿಸುವ ಬಗ್ಗೆ ಚರ್ಚೆ ನಡೆಯಲಿದೆ.

ಯುವಕರನ್ನು ಸೆಳೆಯುವ ಬಗ್ಗೆ ಹಾಗೂ ಕೇಂದ್ರ ಎನ್ ಡಿಎ ಸರ್ಕಾರದ ಭೂ ಸ್ವಾಧೀನ ಮಸೂದೆ ವಿರುದ್ಧ ಯಾವರೀತಿಯ ಹೋರಾಟಗಾನ್ನು ಆರಂಭಿಸಬೇಕು ಎಂಬ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಲಿದೆ.

ಇನ್ನು ದೆಹಲಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಅಜಯ್ ಮಾಕೇನ್ ನೇಮಕವಾಗುವ ಸಾಧ್ಯತೆಯಿದೆ. ರಾಹುಲ್ ಗಾಂಧಿಗೆ ಎಐಸಿಸಿ ಅಧ್ಯಕ್ಷ ಸ್ಥಾನ ನೀಡುವ ಕುರಿತೂ ಸಮಾಲೋಚನೆ ನಡೆಯಲಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited