Untitled Document
Sign Up | Login    
Dynamic website and Portals
  
January 13, 2015

ವಿಚಾರಣೆಗೆ ಬಾರದ ಜನಾರ್ಧನ ರೆಡ್ಡಿ ಜಾಮೀನು ಅರ್ಜಿ

ಜನಾರ್ಧನ ರೆಡ್ಡಿ ಜನಾರ್ಧನ ರೆಡ್ಡಿ

ನವದೆಹಲಿ : ಒಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಜನಾರ್ಧನ ರೆಡ್ಡಿ ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆ ಇಂದು ಸುಪ್ರೀಂ ಕೋರ್ಟ್ ನಲ್ಲಿ ಬಾರದ ಕಾರಣ ಇನ್ನು ಕೆಲ ಕಾಲ ರೆಡ್ಡಿ ಜೈಲಿನಲ್ಲಿಯೇ ಕಾಲ ಕಳೆಯಬೇಕಾಗಿದೆ.

ಜನಾರ್ಧನ ರೆಡ್ಡಿ ವಿರುದ್ಧದ ಎಲ್ಲಾ ಪ್ರಕರಣಗಳಿಗೂ ಈ ಹಿಂದೆಯೇ ಜಾಮೀನು ದೊರೆತಿತ್ತು. ಒಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣ ಒಂದಲ್ಲಿ ಮಾತ್ರ ರೆಡ್ಡಿಗೆ ಜಾಮೀನು ಮಂಜೂರಾಗಬೇಕಿತ್ತು. ಆದರೆ ಸುಪ್ರೀಂ ಕೋರ್ಟ್ ನಲ್ಲಿ ಇಂದು ಅರ್ಜಿವಿಚಾರಣೆ ಬಾರದ ಕಾರಣ ಮುಂದಿನ ಮಂಗಳವಾರ ಅರ್ಜಿ ವಿಚಾರಣೆ ನಡೆಯುವ ಸಾಧ್ಯತೆಯಿದೆ.

ಈ ನಡುವೆ ನಾಳೆಯೇ ಜಾಮೀನು ಅರ್ಜಿ ವಿಚಾರಣೆ ನಡೆಸುವಂತೆ ಜನಾರ್ಧನ ರೆಡ್ದಿಪರ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್ ನ್ಯಾ.ಮೂ ದತ್ತು, ಸಹಜ ಪ್ರಕ್ರಿಯೆಯಲ್ಲಿ ಜಾಮೀನು ಅರ್ಜಿ ವಿಚಾರಣೆಗೆ ಬರಲಿ ಎಂದು ಸೂಚನೆ ನೀಡಿದರು. ಈ ಹಿನ್ನಲೆಯಲ್ಲಿ ಜ.20ರಂದು ಅರ್ಜಿ ವಿಚಾರಣೆ ನಡೆಯುವ ಸಾಧ್ಯತೆಯಿದೆ.

ಜನಾರ್ಧನ ರೆಡ್ಡಿ ವಿರುದ್ಧ ಒಟ್ಟು 8 ಪ್ರಕರಣಗಳು ದಾಖಲಗಿದ್ದವು. ಅವುಗಳಲ್ಲಿ ಈಗಾಗಲೇ 7 ಕೇಸ್ ಗಳಲ್ಲಿ ಜಾಮೀನು ದೊರೆತಿದ್ದು, ಒಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾತ್ರ ಜಾಮೀನು ಸಿಗಬೇಕಿತ್ತು. ಈ ಪ್ರಕರಣದಲ್ಲಿ ರೆಡ್ಡಿಗೆ ಜಾಮೀನು ದೊರೆತಲ್ಲಿ ಜ.13ರಂದೇ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ ಎಂದು ನಿರೀಕ್ಷಲಾಗಿತ್ತು. ಆದರೆ ಈಗ ವಿಚಾರಣೆ ಇನ್ನಷ್ಟು ದಿನಗಳವರೆಗೆ ವಿಳಂಬವಾಗಲಿದೆ. 2011, ಸೆ.5ರಂದು ಓಬಳಾಪುರಂ ಮೈನಿಂಗ್ ಕಂಪನಿ ಅಕ್ರಮ ಗಣಿಕಾರಿಕೆ ಹಿನ್ನಲೆಯಲ್ಲಿ ಜನಾರ್ಧನ ರೆಡ್ಡಿಯವರನ್ನು ಬಂಧಿಸಲಾಗಿತ್ತು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited