ನವದೆಹಲಿ : ನಟ ಸಲ್ಮಾನ್ ಖಾನ್ ವಿರುದ್ಧದ ಕೃಷ್ಣಮೃಗ ಭೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಹೋರಾಟದಲ್ಲಿ ಸಲ್ಮಾನ್ ಗೆ ಹಿನ್ನಡೆಯುಂಟಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಹೈಕೊರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಈ ಮೂಲಕ ಕಾನೂನು ಹೋರಾಟದಲ್ಲಿ ಸಲ್ಮಾನ್ ಗೆ ಹಿನ್ನಡೆಯಾಗಿದೆ.
1998ರಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ವಿರುದ್ಧ ಕೃಷ್ಣಮೃಗ ಬೇಟೆ ಪ್ರಕರಣ ದಾಖಲಾಗಿತ್ತು. 2007ರಲ್ಲಿ ರಾಜಸ್ಥಾನದ ಜೋಧ್ ಪುರದ ಕೆಳ ನ್ಯಾಯಾಲಯ ಸಲ್ಮಾನ್ ಖಾನ್ ತಪ್ಪಿತಸ್ಥ ಎಂದು ತೀರ್ಪು ನೀಡಿತ್ತು. ಅಲ್ಲದೇ ಸಲ್ಮಾನ್ ಖಾನ್ ಗೆ 5 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಕೆಳ ನ್ಯಾಯಲಯದ ತೀರ್ಪು ಪ್ರಶ್ನಿಸಿ ಸಲ್ಮಾನ್ ಹೈಕೋರ್ಟ್ ಮೊರೆ ಹೋಗಿದ್ದರು. ಕೆಳ ನ್ಯಾಯಾಲಯದ ಶಿಕ್ಷೆಯ ಆದೇಶಕ್ಕೆ ರಾಜಸ್ಥಾನ ಹೈಕೋರ್ಟ್ ತಡೆ ನೀಡಿತ್ತು.
ಬಳಿಕ ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಜಸ್ಥಾನ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆ ನಡೆಸಿರದ ಸುಪ್ರೀಂ ಕೋರ್ಟ್ ನ ನ್ಯಾ.ಎನ್.ವಿ.ರಮಣ ಅವರನ್ನೊಳಗೊಂಡ ನ್ಯಾಯಪೀಠ ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಿದೆ. ಈ ಹಿನ್ನಲೆಯಲ್ಲಿ ಸಲ್ಮಾನ್ ಖಾನ್ ಬ್ರಿಟನ್ ದೇಶದ ವೀಸಾವನ್ನು ಕಳೆದುಕೊಂಡಿದ್ದಾರೆ.
ಅಳಿವಿನಂಚಿನಲ್ಲಿರುವ ಕೃಷ್ಣಮೃಗವನ್ನು ಬೇಟೆಯಾಡುವುದು ಕಾನೂನು ರೀತ್ಯಾ ಅಪರಾಧವಾಗಿದೆ.