ನವದೆಹಲಿ : ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ದರ ಪಾತಾಳಕ್ಕೆ ಕುಸಿದಿದ್ದು ಪೆಟ್ರೋಲ್, ಡೀಸೆಲ್ ದರ ಇಳಿಕೆಯಾಗುವ ಸಾಧ್ಯತೆ ಇದೆ.
ಪ್ರತಿ ಬ್ಯಾರೆಲ್ ತೈಲ ದರ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ 45 ಡಾಲರ್ ಗಳಿಗೆ ಕುಸಿದಿದೆ. ಈ ಹಿನ್ನೆಲೆಯಲ್ಲಿ ಪೆಟ್ರೋಲ್ ಹಾಗೂ ಡಿಸೇಲ್ ದರ ಪ್ರತಿ ಲೀಟರ್ ಗೆ 2 ರೂಪಾಯಿ ಇಳಿಕೆಯಾಗುವ ಸಾಧ್ಯತೆ ಇದೆ. ಕಳೆದ ಆರು ವರ್ಷಗಳಲ್ಲೇ ಇದು ದಾಖಲೆಯ ಕುಸಿತವಾಗಿದೆ.
ಆರ್ಥಿಕ ಹಿಂಜರಿತದ ಬಳಿಕ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ದರ ಈ ಮಟ್ಟಿಗಿನ ಕುಸಿತ ಕಾಣುತ್ತಿರುವುದು ಇದೇ ಮೊದಲಾಗಿದ್ದು ತೈಲ ವ್ಯವಹಾರ ವಿಶ್ಲೇಷಕರ ಪ್ರಕಾಪ, ತೈಲ ದರ ರು.2500 (40 ಡಾಲರ್) ಗಿಂತಲೂ ಕೆಳಗೆ ಕುಸಿಯುವ ಸಾಧ್ಯತೆ ಇದೆ.
ದಿನದಿಂದ ದಿನಕ್ಕೆ ಕಚ್ಚಾ ತೈಲ ದರ ಇಳಿಕೆಯಾಗುತ್ತಿರುವುದು ಗ್ರಾಹಕರಲ್ಲಿ ಸಂತಸ ತಂದಿದೆ. ನರೇಂದ್ರ ಮೋದಿ ಸರ್ಕಾರ ಅಸ್ಥಿತ್ವಕ್ಕೆ ಬಂದಾಗಿನಿಂದಲೂ ಪೆಟ್ರೋಲ್, ಡಿಸೇಲ್ ದರ ಇಳಿಕೆಯಾಗುತ್ತಿರುವುದು ವಾಹನ ಸವಾರರಿಗೆ ಬೆಲೆ ಏರಿಕೆ ಹೊರೆ ಇಳಿಕೆಯಾಗಿದೆ.