Untitled Document
Sign Up | Login    
Dynamic website and Portals
  
January 14, 2015

ಗಂಗಾ ನದಿಯಲ್ಲಿ 100ಕ್ಕೂ ಅಧಿಕ ಶವಗಳು ಪತ್ತೆ

ಲಖ್ನೋ : ಪುಣ್ಯ ನದಿಗಳಲ್ಲೊಂದಾಗಿರುವ ಗಂಗಾ ನದಿಯಲ್ಲಿ 100ಕ್ಕೂ ಹೆಚ್ಚು ಮಾನವ ಶವಗಳು ಪತ್ತೆಯಾಗಿರುವುದು ಅಚ್ಚರಿಗೆ ಕಾರಣವಾಗಿದೆ.

ಕಾನ್ಪೂರ ಯುನಾವೋ ಸಮೀಪದ ಪರಿಯಾರ್ ಘಾಟ್ ಗಂಗಾ ನದಿಯಲ್ಲಿ 108ಕ್ಕೂ ಅಧಿಕ ಶವಗಳು ಪತ್ತೆಯಾಗಿದ್ದು, ಸ್ಥಳೀಯರು ಈ ಕುರಿತು ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಈ ಕುರಿತು ಪರಿಶೀಲನೆ ನಡೆಸಿದ್ದಾರೆ. ಈ ಮಾನವ ಶವಗಳು ಸುಮಾರು 5 ತಿಂಗಳ ಹಿಂದೆ ಇಲ್ಲಿ ತಂದು ಹೂತಿರುವ ಬಗ್ಗೆ ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಯುನಾವೋ ಅಧಿಕಾರಿಯಾದ ಪ್ರಸಾದ್ ಶುಕ್ಲಾ, ಹಿಂದೂಗಳು ನೂರಾರು ಸಂಖ್ಯೆಯಲ್ಲಿ ಶವಗಳನ್ನು ಗಂಗಾನದಿಯಲ್ಲಿ ಅಂತ್ಯಕ್ರಿಯೆ ಮಾಡುತ್ತಿದ್ದು, ಇದೀಗ ನದಿಯಲ್ಲಿ ನೀರು ಬತ್ತಿಹೋಗಿದೆ. ಆದ್ದರಿಂದ ತಳದಲ್ಲಿರುವ ಶವಗಳು ಮೇಲೆ ತೇಲಿಬಂದಿವೆ. ಆದ್ದರಿಂದ ಸ್ಥಳೀಯರು ಆತಂಕ ಪಡುವ ಅಗತ್ಯವಿಲ್ಲ. ಈ ವಿಚಾರ ಕುರಿತು ತನಿಖೆ ನಡೆಸುತ್ತೇವೆ ಎಂದು ತಿಳಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : General

ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಮೂರನೇ ಜಲಾಂತರ್ಗಾಮಿ ನೌಕೆ ಪ್ರಾಜೆಕ್ಟ್‌ 28ರ ಅಡಿಯಲ್ಲಿ ನಿರ್ಮಾಣಗೊಂಡ ಐಎನ್‌ಎಸ್‌ ಕಿಲ್ತಾನ್‌ ನೌಕೆಯನ್ನು ವಿಶಾಖಪಟ್ಟಣದ ನೌಕಾ ನೆಲೆಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಾರ್ಪಣೆ ಮಾಡಿದರು.
  • ಆರುಷಿ ಹತ್ಯೆ ಪ್ರಕರಣ: ತಲ್ವಾರ್ ದಂಪತಿಗಳು ಖುಲಾಸೆ;ಅಲಹಾಬಾದ್ ಹೈಕೋರ್ಟ್ ತೀರ್ಪು
  • ಅ.12ರ ಮಧ್ಯ ರಾತ್ರಿಯಿಂದ ಪೆಟ್ರೋಲ್ ಬಂಕ್ ಬಂದ್
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited